Thursday, December 2, 2021
spot_img
Homeಸ್ಥಳೀಯ ಸುದ್ದಿಕಾರ್ಕಳ : ನಳಿನ್ ಕುಮಾರ್ ಕಟೀಲ್ ವಿರುದ್ಧ ಖಂಡನಾ ನಿರ್ಣಯ

ಕಾರ್ಕಳ : ನಳಿನ್ ಕುಮಾರ್ ಕಟೀಲ್ ವಿರುದ್ಧ ಖಂಡನಾ ನಿರ್ಣಯ

ಕಾರ್ಕಳ : ರಾಹುಲ್ ಗಾಂಧಿಯವರ ಬಗ್ಗೆ ಇತ್ತೀಚೆಗೆ ದುರುದ್ದೇಶಪೂರಿತ ಅವಹೇಳನಕಾರೀ ಹೇಳಿಕೆ ನೀಡಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಿರುದ್ಧ ಬ್ಲಾಕ್‌ ಕಾಂಗ್ರೆಸ್‌ ಪದಾಧಿಕಾರಿಗಳ ಸಭೆಯಲ್ಲಿ ಖಂಡನಾ ನಿರ್ಣಯ ಕೈಗೊಳ್ಳಲಾಯಿತು. ಅ. 20ರಂದು ಪ್ರಕಾಶ್ ಹೊಟೇಲ್ ಸಭಾಂಗಣದಲ್ಲಿ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿಯವರ ಅಧ್ಯಕ್ಷತೆಯಲ್ಲಿ ನಡೆದ ಹೆಬ್ರಿ ಹಾಗೂ ಕಾರ್ಕಳ ಬ್ಲಾಕ್ ಕಾಂಗ್ರೆಸ್ ಪದಾಧಿಕಾರಿಗಳ ಸಭೆಯಲ್ಲಿ ಖಂಡನಾ ನಿರ್ಣಯ ಮಾಡಲಾಯಿತು.

ಇತಿಹಾಸ ತಿಳಿಯದವರಿಂದ ಇತಿಹಾಸ ನಿರ್ಮಿಸಲು ಸಾಧ್ಯವಿಲ್ಲ. ತನ್ನ ನೈಜ ಯೋಗ್ಯತೆಗೆ ಮಿಕ್ಕಿದ ಹುದ್ದೆಯ ಅಮಲಿನಲ್ಲಿ ಜಗತ್ತೆಲ್ಲ ಡ್ರಗ್ ಎಡಿಕ್ಟ್ ಆದಂತೆ ಕಾಣುವ ಅಪ್ರಬುದ್ಧ ಮನಸ್ಥಿತಿಯ ಬಿಜೆಪಿ ರಾಜ್ಯಾಧ್ಯಕ್ಷರಿಗೆ ನೆಹರೂ ಕುಟುಂಬದ ಹಿನ್ನೆಲೆ ತಿಳಿದಿಲ್ಲ. ಮಹಾತ್ಮ ಗಾಂಧೀ ತತ್ವ ಸಿದ್ಧಾಂತದಡಿ ಸಾಮಾನ್ಯರಲ್ಲಿ ಸಾಮಾನ್ಯನಂತೆ ಪ್ರಜಾತಂತ್ರಕ್ಕೊಪ್ಪುವ ರಾಜನೀತಿಯ ನಡೆಯ, ಆಕ್ಸಫರ್ಡ್‌ನಲ್ಲಿ ಶಿಕ್ಷಣ ಪಡೆದ ರಾಹುಲ್ ಗಾಂಧಿಯನ್ನು ಅರ್ಥ ಮಾಡಿಕೊಳ್ಳುವ ಶಕ್ತಿಯೂ ಈ ನಳಿನ್‌ಗಿಲ್ಲ. ಇಂತಹ ಬೇಜವಾಬ್ಧಾರಿ ಹೇಳಿಕೆಗಳು ಮುಂದುವರಿದಲ್ಲಿ ಇವರ ವಿರುದ್ಧ ಕಾನೂನಾತ್ಮಕ ಕ್ರಮ ಕೈಗೊಳ್ಳಲಾಗುತ್ತದೆ ಎಂದು ನಿರ್ಣಯಿಸಲಾಯಿತು. ಉಡುಪಿ ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ನೀರೆ ಕೃಷ್ಣ ಶೆಟ್ಟಿ, ಹೆಬ್ರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ ಪೂಜಾರಿ, ಕಾರ್ಕಳ ಬ್ಲಾಕ್‌ ಕಾಂಗ್ರೆಸ್ ಅಧ್ಯಕ್ಷ ಸದಾಶಿವ ದೇವಾಡಿಗ ಅನುಮೋದಿಸಿದರು.‌ ಜಿಲ್ಲಾ ಉಪಾಧ್ಯಕ್ಷ ಸುಧಾಕರ ಕೋಟ್ಯಾನ್, ಜಿಲ್ಲಾ ವಕ್ತಾರ ಬಿಪಿನ್ ಚಂದ್ರ ಪಾಲ್ ನಕ್ರೆ, ಬ್ಲಾಕ್‌ ಕಾಂಗ್ರೆಸ್‌ ವಕ್ತಾರ ಶುಭದ ರಾವ್‌, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ದೀಪಕ್ ಕೋಟ್ಯಾನ್, ಹಿರಿಯ ನ್ಯಾಯವಾದಿ ಶೇಖರ ಮಡಿವಾಳ, ವಿವಿಧ ಘಟಕಗಳ ಅಧ್ಯಕ್ಷರು ಪದಾಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!