Tuesday, December 7, 2021
spot_img
Homeಸ್ಥಳೀಯ ಸುದ್ದಿಗೃಹ ಸಚಿವ ಆರಗ ಜ್ಞಾನೇಂದ್ರ ರಾಜೀನಾಮೆ ನೀಡುವಂತೆ ಜಿಲ್ಲಾ ಕಾಂಗ್ರೆಸ್‌ ಒತ್ತಾಯ

ಗೃಹ ಸಚಿವ ಆರಗ ಜ್ಞಾನೇಂದ್ರ ರಾಜೀನಾಮೆ ನೀಡುವಂತೆ ಜಿಲ್ಲಾ ಕಾಂಗ್ರೆಸ್‌ ಒತ್ತಾಯ

ಕರಾವಳಿ ಭಾಗದಲ್ಲಿ ಅನೈತಿಕ ಪೊಲೀಸ್‌ಗಿರಿ

ಸಂಘ ಪರಿವಾರ ಹಮ್ಮಿಕೊಂಡ ತ್ರಿಶೂಲ ದೀಕ್ಷೆಗೆ ಪ್ರತಿಪಕ್ಷ ನಾಯಕ ಸಿದ್ಧರಾಮಯ್ಯನವರೆ ಮೊದಲ ಬಲಿಯಾಗಲಿದ್ದಾರೆ ಎಂದು ರಾಜಾರೋಷವಾಗಿ ಬೆದರಿಕೆಯೊಡ್ಡಿದ ಹಿಂದೂ ಜಾಗರಣಾ ವೇದಿಕೆಯ ವಿರುದ್ದ ಕಾನೂನು ಕ್ರಮ ಕೈಗೊಳ್ಳಲು ವಿಫಲರಾದ ಮತ್ತು ತನ್ನದೇ ಇಲಾಖೆಯ ಕಾರ್ಯಕ್ರಮದಲ್ಲಿ ಪೊಲೀಸರು ಖಾಕಿ ಕಳಚಿ ಕೇಸರಿ ತೊಡಲು ಪ್ರಚೋದನೆ ನೀಡಿದ ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ತನ್ನ ಕರ್ತವ್ಯ ಚ್ಯುತಿಯಿಂದುಂಟಾದ ಸಾಂವಿಧಾನಿಕ ನಡೆಯ ಉಲ್ಲಂಘನೆಯ ಹೊಣೆಹೊತ್ತು ರಾಜಿನಾಮೆ ನೀಡಬೇಕು ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಹೇಳಿಕೆಯಲ್ಲಿ ಆಗ್ರಹಿಸಿದೆ.
ಕರಾವಳಿ ಭಾಗದಲ್ಲಿ ಅನೈತಿಕ ಪೊಲೀಸ್ ಗಿರಿ ಅವ್ಯಾಹತವಾಗಿ ನಡೆಯುತ್ತಿದ್ದು ಗಂಡು ಹೆಣ್ಣು ಒಟ್ಟಾಗಿ ತಿರುಗಾಡದಂತಹ ಅಮಾನವೀಯ ಪರಿಸ್ಥಿತಿ ಉಂಟಾಗಿದೆ. ಮುಂದಿನ ದಿನಗಳಲ್ಲಿ ಇದು ತಾಲೀಬಾನ್ ಸಂಸ್ಕೃತಿಯಾಗಿ ರೂಪಗೊಳ್ಳದಂತೆ ತಡೆಯಬೇಕಾಗಿದ್ದ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕ್ರಿಯೆಗೆ ಪ್ರತಿಕ್ರಿಯೆ ಎಂದು ವ್ಯಾಖ್ಯಾನಿಸಿ ಇದಕ್ಕೆ ಪರೋಕ್ಷ ಬೆಂಬಲ ನೀಡುತ್ತಿರುವುದು ಖಂಡನೀಯ ಎಂದು ಕಾಂಗ್ರೆಸ್ ಹೇಳಿದೆ.
ಕೇಸರಿ ಮತ್ತು ತ್ರಿಶೂಲ ತ್ಯಾಗ ಪರಿತ್ಯಾಗ, ಶಾಂತಿ ಸೌಹಾರ್ದತೆಯ ಸಂಕೇತ. ಆದರೆ ಬಿಜೆಪಿ ಇದನ್ನು ತನ್ನ ರಾಜಕೀಯ ಅಸ್ತಿತ್ವ ಉಳಿಸಿಕೊಳ್ಳುವ ಸಲುವಾಗಿ ಸಂಘ ಪರಿವಾರದ ಮೂಲಕ ಸಾಮಾಜಿಕ ಭಯೋತ್ಪಾದನೆಗೆ ಬಳಸಿಕೊಳ್ಳುತ್ತಿದೆ. ಇದು ಹಿಂದೂ ಆಸ್ಮಿತೆಗೆ ಮಾಡಿದ ಮಹಾಮೋಸ. ಮುಂದೊಂದು ದಿನ ಸ್ವಯಂ ಬಿಜೆಪಿಯೇ ಇದಕ್ಕೆ ಬಲಿಯಾಗಿ ದೇಶದಲ್ಲಿ ತನ್ನ ಅಸ್ತಿತ್ವ ಕಳೆದುಕೊಳ್ಳಲಿದೆ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ ಕುಮಾರ್ ಕೊಡವೂರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!