Tuesday, December 7, 2021
spot_img
Homeಸುದ್ದಿಕಾರ್ಕಳ ಪುರಸಭೆಯ ಸಾಮಾನ್ಯ ಸಭೆ : ಮುಖ್ಯರಸ್ತೆಯ ದುರಸ್ತಿಗೆ ಒತ್ತಾಯಿಸಿ ವಿಪಕ್ಷ ಸದಸ್ಯರ ಧರಣಿ

ಕಾರ್ಕಳ ಪುರಸಭೆಯ ಸಾಮಾನ್ಯ ಸಭೆ : ಮುಖ್ಯರಸ್ತೆಯ ದುರಸ್ತಿಗೆ ಒತ್ತಾಯಿಸಿ ವಿಪಕ್ಷ ಸದಸ್ಯರ ಧರಣಿ

ಕಾರ್ಕಳ : ಕಾರ್ಕಳ ಪುರಸಭೆಯ ವ್ಯಾಪ್ತಿಯ ಮುಖ್ಯ ರಸ್ತೆಯಲ್ಲಿರುವ ಹೊಂಡಗಳನ್ನು ಮುಚ್ಚಿ ರಸ್ತೆ ದುರಸ್ತಿಪಡಿಸುವಂತೆ ಒತ್ತಾಯಿಸಿ ವಿಪಕ್ಷ ಕಾಂಗ್ರೆಸ್ ಸದಸ್ಯರು ಸೋಮವಾರ ನಡೆದ ಪುರಸಭಾ ಸಾಮಾನ್ಯ ಸಭೆಯಲ್ಲಿ ಧರಣಿ ಕುಳಿತರು.

ವಿಪಕ್ಷ ಸದಸ್ಯ ಅಲ್ಪಾಕ್ ಅಹ್ಮದ್ ಅವರ ನೇತೃತ್ವದಲ್ಲಿ ಧರಣಿ ನಡೆಸಿದ ವಿಪಕ್ಷ ಸದಸ್ಯರು, ಒಳಚರಂಡಿ ಕಾಮಗಾರಿ ಅವೈಜ್ಞಾನಿಕ ವಿಧಾನದಲ್ಲಿ ನಡೆಸಿರುವುದರಿಂದ ರಸ್ತೆ ಗುಂಡಿಗಳೇ ತುಂಬಿದೆ. ಈ ಬಗ್ಗೆ ಹಲವಾರು ಬಾರಿ ದೂರುಗಳನ್ನು ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಈ ರಸ್ತೆಯನ್ನು ದುರಸ್ತಿ ಸರಿಪಡಿಸುವವರೆಗೆ ಧರಣಿ ಹಿಂಪಡೆಯಲ್ಲ ಎಂದರು.

ಸದಸ್ಯರಾದ ಶುಭದ ರಾವ್,ವಿನ್ನಿಬೋಲ್ಡ್, ರಹ್ಮತ್ ಎನ್. ಶೇಖ್, ಸೋಮನಾಥ ನಾಯ್ಕ, ಪ್ರತಿಮಾ ರಾಣೆ, ನಳಿನಿ ಆಚಾರ್ಯ, ಹರೀಶ್ ದೇವಾಡಿಗ, ಪ್ರಭಾ ಕಿಶೋರ್ ಧ್ವನಿಗೂಡಿಸಿದರು.

ಈ ಸಂಧರ್ಭದಲ್ಲಿ ಅಧ್ಯಕ್ಷೆ ಸುಮಾ ಕೇಶವ್ ಮಾತನಾಡಿ, ಮಳೆಗಾಲ, ಅಕಾಲಿಕ ಮಳೆಯಿಂದಾಗಿ ಕೆಲಸಗಳು ನಿಗದಿತ ಸಮಯದಲ್ಲಿ ನಡೆಸಲು ಅಸಾಧ್ಯವಾಗಿದೆ. ಇದೀಗ ಸಂಬಂದಪಟ್ಟ ಗುತ್ತಿಗೆದಾರರಿಗೆ ಸರಿಪಡಿಸುವಂತೆ ತಿಳಿಸಲಾಗಿದೆ. ಮಾತ್ರವಲ್ಲ ಉಳಿದ ಕಡೆಗೂ ರಸ್ತೆ ದುರಸ್ತಿಗೆ ಬೇರೆ ನಿಧಿಯಿಂದ ಹಣ ವಿನಿಯೋಗಿಸಲಾಗುವುದು ಎಂದರು.

ಬಳಿಕ ವಿಪಕ್ಷ ಸದಸ್ಯರು ಧರಣಿ ಹಿಂಪಡೆದು ಮಾಸಿಕ ಸಭೆಯಲ್ಲಿ ಭಾಗವಹಿಸಿದರು.

ವೇದಿಕೆಯಲ್ಲಿ ಉಪಾಧ್ಯಕ್ಷೆ ಪಲ್ಲವಿ ಪ್ರವೀಣ್, ಸ್ಥಾಯಿ ಸಮಿತಿಯ ಅಧ್ಯಕ್ಷ ಲಕ್ಷ್ಮೀನಾರಾಯಣ ಮಲ್ಯ, ಮುಖ್ಯಾಧಿಕಾರಿ ರೂಪಾ ಶೆಟ್ಟಿ ಉಪಸ್ಥಿತರಿದ್ದರು

ಆಡಳಿತ ಪಕ್ಷದ ಸದಸ್ಯರಾದ ಯೋಗಿಶ್ ದೇವಾಡಿಗ ,ಶೋಭಾ ದೇವಾಡಿಗ, ಪ್ರದೀಪ್ ಮಾರಿಗುಡಿ, ನೀತಾ
ಆಚಾರ್ಯ, ಮಮತಾ, ಶಶಿಕಲಾ ಶೆಟ್ಟಿ, ಭಾರತಿ ಅಮೀನ್, ಮೀನಾಕ್ಷಿ ಗಂಗಾಧರ್, ನಾಮನಿರ್ದೇಶನ ಸದಸ್ಯರಾದ ಅವಿನಾಶ್ ಶೆಟ್ಟಿ, ಪ್ರಸನ್ನ, ಸಂತೋಷ್ ರಾವ್,ಅಶೋಕ್ ಸುವರ್ಣ, ಸಂಧ್ಯಾ ಮಲ್ಯ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!