Tuesday, December 7, 2021
spot_img
Homeಸ್ಥಳೀಯ ಸುದ್ದಿಭುವನೇಂದ್ರ ಕಾಲೇಜಿನಲ್ಲಿ ಕನ್ನಡಕ್ಕಾಗಿ ನಾವು ಅಭಿಯಾನದ ಅಂಗವಾಗಿ ಅವ್ವ ನನ್ನವ್ವ ನಾಟಕ ಪ್ರದರ್ಶನ

ಭುವನೇಂದ್ರ ಕಾಲೇಜಿನಲ್ಲಿ ಕನ್ನಡಕ್ಕಾಗಿ ನಾವು ಅಭಿಯಾನದ ಅಂಗವಾಗಿ ಅವ್ವ ನನ್ನವ್ವ ನಾಟಕ ಪ್ರದರ್ಶನ

ಕಾರ್ಕಳ : ಕನ್ನಡಕ್ಕಾಗಿ ನಾವು ಅಭಿಯಾನದ ಅಂಗವಾಗಿ ಶ್ರೀ ಭುವನೇಂದ್ರ ಪದವಿಪೂರ್ವ ಕಾಲೇಜಿನಲ್ಲಿ ಅ. 29ರಂದು ಅವ್ವ ನನ್ನವ್ವ ನಾಟಕ ಪ್ರದರ್ಶನಗೊಂಡಿತು. ರಂಗಕರ್ಮಿ, ಸಂಗೀತಜ್ಞ ಗುರುರಾಜ ಮಾರ್ಪಳ್ಳಿ ರಚಿಸಿ-ನಿರ್ದೇಶಿಸಿದ “ಅವ್ವ ನನ್ನವ್ವ” ನಾಟಕವನ್ನು ನಮ್ಮ ತುಳುವೆರ್ ಸಂಘಟನೆಯ ಅಧ್ಯಕ್ಷ, ಕಾಲೇಜಿನ ಹಳೆ ವಿದ್ಯಾರ್ಥಿ ಸುಕುಮಾರ ಮೋಹನ್ ಮುದ್ರಾಡಿ ಕಲಾತಂಡವು ಕಾಲೇಜಿನ ರಾಮಕೃಷ್ಣ ಸಭಾಂಗಣದಲ್ಲಿ ಪ್ರದರ್ಶಿಸಿತು. ಸರಕಾರಿ ಪದವಿಪೂರ್ವ ಕಾಲೇಜಿನ ನಿಕಟಪೂರ್ವ ಪ್ರಾಂಶುಪಾಲ ಮಾಧವ ಭಟ್, ಪದವಿ ಕಾಲೇಜಿನ ಪ್ರಾಂಶುಪಾಲ ಡಾ. ಮಂಜುನಾಥ ಎ. ಕೋಟ್ಯಾನ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ರಮೇಶ್ ಎಸ್.ಸಿ ಸ್ವಾಗತಿಸಿ, ಉಪನ್ಯಾಸಕಿ ಮಾಲತಿ ಪ್ರಭು ಕಾರ್ಯಕ್ರಮ ನಿರ್ವಹಿಸಿದರು. ಕಾಲೇಜಿನ ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!