Tuesday, December 7, 2021
spot_img
HomeUncategorizedಪೋಪ್ ಫ್ರಾನ್ಸಿಸ್ ಅವರನ್ನು ಬೇಟಿ ಮಾಡಿದ ಪ್ರಧಾನಿ ನರೇಂದ್ರ ಮೋದಿ

ಪೋಪ್ ಫ್ರಾನ್ಸಿಸ್ ಅವರನ್ನು ಬೇಟಿ ಮಾಡಿದ ಪ್ರಧಾನಿ ನರೇಂದ್ರ ಮೋದಿ

ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಶನಿವಾರ ವ್ಯಾಟಿಕನ್ ನಲ್ಲಿ ಪೋಪ್ ಫ್ರಾನ್ಸಿಸ್ ಅವರನ್ನು ಭೇಟಿಯಾದರು.

“ಪೋಪ್ ಫ್ರಾನ್ಸಿಸ್ ಅವರನ್ನು ಭೇಟಿಯಾದೆ. ಅವರೊಂದಿಗೆ ವ್ಯಾಪಕವಾದ ವಿಷಯಗಳ ಬಗ್ಗೆ ಚರ್ಚಿಸಲು ನನಗೆ ಅವಕಾಶ ಸಿಕ್ಕಿತು ಮತ್ತು ಭಾರತಕ್ಕೆ ಭೇಟಿ ನೀಡುವಂತೆ ಅವರನ್ನು ಆಹ್ವಾನಿಸಿದೆ” ಎಂದು ಪ್ರಧಾನಿ ಹೇಳಿದ್ದಾರೆ.

ಜಿ-20 ಶೃಂಗಸಭೆಯಲ್ಲಿ ಭಾಗಿಯಾಗಲು ರೋಮ್ ಗೆ ಭೇಟಿ ನೀಡಿರುವ ಪ್ರಧಾನಿ, ಪೋಪ್ ಫ್ರಾನ್ಸಿಸ್ ಅವರನ್ನು ಶನಿವಾರ ಭೇಟಿಯಾಗಿದ್ದು, ಇದು ಅವರಿಬ್ಬರ ಮೊದಲ ಭೇಟಿಯಾಗಿದೆ.

ಹವಾಮಾನ ಬದಲಾವಣೆಯ ವಿರುದ್ಧ ಹೋರಾಡುವುದು ಮತ್ತು ಬಡತನವನ್ನು ತೊಡೆದುಹಾಕುವುದು ಸೇರಿದಂತೆ ವಿವಿಧ ವಿಷಯಗಳ ಕುರಿತು ಪ್ರಧಾನಿ ನರೇಂದ್ರ ಮೋದಿ ಮತ್ತು ಪೋಪ್ ಚರ್ಚಿಸಿದ್ದಾರೆ.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!