Tuesday, December 7, 2021
spot_img
Homeಸ್ಥಳೀಯ ಸುದ್ದಿಕನ್ನಡಿಗರಿಗೆ ಉದ್ಯೋಗ ಕಡ್ಡಾಯಗೊಳಿಸಲು ಸರಕಾರದ ಚಿಂತನೆ -‌ ಸುನಿಲ್‌ ಕುಮಾರ್

ಕನ್ನಡಿಗರಿಗೆ ಉದ್ಯೋಗ ಕಡ್ಡಾಯಗೊಳಿಸಲು ಸರಕಾರದ ಚಿಂತನೆ -‌ ಸುನಿಲ್‌ ಕುಮಾರ್

ಉಡುಪಿ : ಪ್ರಸ್ತುತ ಅಗತ್ಯತೆಯಂತೆ ಸರೋಜಿನಿ ಮಹಿಷಿ ವರದಿಯಲ್ಲಿ ಕೆಲವು ಮಾರ್ಪಾಡುಗಳನ್ನು ತಂದು ರಾಜ್ಯದಲ್ಲಿರುವ ಉದ್ದಿಮೆಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಕಡ್ಡಾಯಗೊಳಿಸಲು ರಾಜ್ಯ ಸರಕಾರ ಚಿಂತಿಸಿದೆ. ಇದಕ್ಕಾಗಿ ಕಾನೂನಿನ ಚೌಕಟ್ಟಿನಲ್ಲಿ ಅವಕಾಶ ಕಲ್ಪಿಸಲಾಗುವುದು ಎಂದು ರಾಜ್ಯ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನೀಲ್ ಕುಮಾರ್ ಹೇಳಿದರು.

ಉಡುಪಿಯ ಅಜ್ಜರಕಾಡಿನಲ್ಲಿರುವ ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ 66ನೇ ಕನ್ನಡ ರಾಜ್ಯೋತ್ಸವದಲ್ಲಿ ಧ್ವಜಾರೋಹಣಗೈದು ಬಳಿಕ ಮಾತನಾಡಿ, ಮುಂದಿನ ವರ್ಷದಿಂದ ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಏಕರೂಪತೆ ನೀಡಲು ಸುತ್ತೋಲೆ ಹೊಡಿಸಲಾಗುವುದು. ಪ್ರಶಸ್ತಿ ಆಯ್ಕೆಗೂ ಏಕರೂಪ ನೀಡಿ ನಿಯಮಗಳನ್ನು ರೂಪಿಸಲಾಗುವುದು ಎಂದರು.

ಈ ಬಾರಿಯ ರಾಜ್ಯ ಪ್ರಶಸ್ತಿಗಳಿಗೆ ಅರ್ಹರನ್ನು ಹುಡುಕಿಕೊಂಡು ಹೋಗಿ ಪ್ರಶಸ್ತಿ ನೀಡಲಾಗಿದೆ. ಈ ಮೂಲಕ ಈವರೆಗೆ ಅನುಸರಿಸುತ್ತಿದ್ದ ಕ್ರಮ ಬಿಟ್ಟು ತೆರೆಮರೆ ಪ್ರತಿಭೆಗಳನ್ನು ಗುರುತಿಸಲಾಗಿದೆ ಎಂದು ಸಚಿವ ಸುನೀಲ್ ಕುಮಾರ್ ಹೇಳಿದರು.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!