Thursday, December 2, 2021
spot_img
Homeಸುದ್ದಿಪೆಟ್ರೋಲ್, ಡೀಸೆಲ್ ದರ ಇಳಿಕೆ ,ದೀಪಾವಳಿಗೆ ಸಿಹಿ ಸುದ್ದಿ ನೀಡಿದ ಸರಕಾರ

ಪೆಟ್ರೋಲ್, ಡೀಸೆಲ್ ದರ ಇಳಿಕೆ ,ದೀಪಾವಳಿಗೆ ಸಿಹಿ ಸುದ್ದಿ ನೀಡಿದ ಸರಕಾರ

ಕೇಂದ್ರ ಸರಕಾರ ದೀಪಾವಳಿಯ ಸಂಧರ್ಭದಲ್ಲಿ ಜನತೆಗೆ ಪೆಟ್ರೋಲ್, ಡೀಸೆಲ್‌ ದರ ಕಡಿತ ಮಾಡುವ ಮೂಲಕ ಉಡುಗೊರೆ​ಯೊಂದ ನೀಡಿದೆ . ಪೆಟ್ರೋಲ್, ಡೀಸೆಲ್ ಬೆಲೆ ಬುಧವಾರ ಮಧ್ಯರಾತ್ರಿಯಿಂದಲೇ ಇಳಿಕೆ ಆಗಲಿದೆ.

ಡೀಸೆಲ್ ಮೇಲೆ ಅಬಕಾರಿ ಸುಂಕ 10 ರೂಪಾಯಿ,ಪೆಟ್ರೋಲ್​ ಮೇಲೆ ಅಬಕಾರಿ ಸುಂಕ 5 ರೂಪಾಯಿ ಕಡಿತಗೊಳಿಸಲಾಗಿದೆ.

ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆ ಜನಸಾಮಾನ್ಯರ ಮೇಲೆ ಭಾರಿ ಹೊರೆಯಾಗಿತ್ತು. ದಿನಬಳಕೆಯ ವಸ್ತುಗಳ ದರವೂ ಹೆಚ್ಚಳವಾಗಿತ್ತು. ದೀಪಾವಳಿಯ ಸಂದರ್ಭದಲ್ಲಿ ಇಂಧನ ದರ ಇಳಿಕೆ ಮಾಡಲಾಗಿದೆ. ಜತೆಗೆ ಇತರ ಇಂಧನ ದರ ಕೂಡ ಕಡಿಮೆ ಆಗಲಿದೆ ಎಂದು ಮಾಹಿತಿ ಲಭ್ಯವಾಗಿದೆ.

ಪೆಟ್ರೋಲ್, ಡೀಸೆಲ್ ಮೇಲೆ ಅಬಕಾರಿ ಸುಂಕ ಕಡಿತ ಹಿನ್ನೆಲೆ ಪೆಟ್ರೋಲ್, ಡೀಸೆಲ್ ಮೇಲಿನ ವ್ಯಾಟ್ (VAT)​ ಕಡಿತಕ್ಕೆಎಲ್ಲಾ ರಾಜ್ಯಗಳಿಗೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​ ಒತ್ತಾಯಿಸಿದ್ದಾರೆ.

ಪೆಟ್ರೋಲ್ ಮೇಲಿನ ಅಬಕಾರಿ ಸುಂಕವನ್ನು ಕಳೆದ ವರ್ಷ 19.98 ರೂಪಾಯಿಗಳಿಂದ 32.9 ರೂಪಾಯಿಗೆ ಏರಿಕೆ ಮಾಡಲಾಗಿತ್ತು. ಇದೀಗ ಅಬಕಾರಿ ಸುಂಕವನ್ನು ಮತ್ತೆ ಇಳಿಕೆ ಮಾಡಲಾಗಿದೆ. ಬಳಿಕ ಸತತವಾಗಿ ಇಂಧನ ದರ ಏರಿಕೆ, ಅಡುಗೆ ಅನಿಲ ದರ ಏರಿಕೆಯಿಂದ ಜನಜೀವನ ಸಂಕಷ್ಟಕ್ಕೀಡಾಗಿತ್ತು. ಇತ್ತೀಚೆಗಷ್ಟೇ ಎಲ್​ಪಿಜಿ ಸಿಲಿಂಡರ್ ದರದಲ್ಲಿ 266 ರೂಪಾಯಿ ಏರಿಕೆ ಮಾಡಲಾಗಿತ್ತು. ಇದೀಗ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ ಜನರಿಗೆ ಕೊಂಚ ಸಮಾಧಾನ ತಂದಿದೆ.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!