ಕಾರ್ಕಳ :ಶಿರ್ಡಿ ಸಾಯಿ ಪದವಿ ಪೂರ್ವ ಕಾಲೇಜಿನ ಉದ್ಘಾಟನೆ ಸಮಾರಂಭ ಮತ್ತು ಶಿರ್ಡಿ ಸಾಯಿ ಸಮೂಹ ಸಂಸ್ಥೆಗಳ ನೂತನ ಲಾಂಛನ, ಪದವಿ ಕಾಲೇಜಿನ ವಿದ್ಯಾರ್ಥಿ ಘಟಕ ಹಾಗೂ ಎನ್.ಎಸ್.ಎಸ್ ಘಟಕದ ಉದ್ಘಾಟನಾ ಸಮಾರಂಭ ನ. 21ರಂದು ನಡೆಯಿತು.
ವಿಧಾನ ಪರಿಷತ್ ಮಾಜಿ ಸದಸ್ಯ ಗಣೇಶ್ ಕಾರ್ಣಿಕ್ ಉದ್ಘಾಟಿಸಿದರು. ಭುವನೇಂದ್ರ ಕಾಲೇಜಿನ ನಿವೃತ ಪ್ರಾಚಾರ್ಯ ಪದ್ಮನಾಭ ಗೌಡ, ಶಿರ್ಡಿ ಸಾಯಿ ಸಮೂಹ ಸಂಸ್ಥೆಗಳ ಸಂಸ್ಥಾಪಕ ಚಂದ್ರಹಾಸ ಸುವರ್ಣ, ಅಧ್ಯಕ್ಷ ಅಭಿಷೇಕ್ ಸುವರ್ಣ, ಮುಖ್ಯ ಕಾರ್ಯನಿರ್ವಾಹಣಾ ಅಧಿಕಾರಿ ಆಶೀಷ್ ಶೆಟ್ಟಿ, ಸಂಸ್ಥೆಯ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.








































