Thursday, December 2, 2021
spot_img
Homeಸುದ್ದಿಉಗ್ರ ಸಂಘಟನೆ ಪತ್ರಿಕೆಯಲ್ಲಿ ಮುರುಡೇಶ್ವರನ ಭಗ್ನಗೊಂಡ ಪ್ರತಿಮೆ..! ಐಸಿಸ್ ದಾಳಿಗೆ ಸಂಚು?

ಉಗ್ರ ಸಂಘಟನೆ ಪತ್ರಿಕೆಯಲ್ಲಿ ಮುರುಡೇಶ್ವರನ ಭಗ್ನಗೊಂಡ ಪ್ರತಿಮೆ..! ಐಸಿಸ್ ದಾಳಿಗೆ ಸಂಚು?

ಕರ್ನಾಟಕದ ಪ್ರಸಿದ್ಧ ಯಾತ್ರಾತಾಣಗಳಲ್ಲಿ ಒಂದಾದ ಉತ್ತರ ಕನ್ನಡದ ಮುರುಡೇಶ್ವರ ದ ಬೃಹತ್ ಈಶ್ವರ ಪ್ರತಿಮೆ ಚಿತ್ರ ಜಗತ್ತಿನ ಕುಖ್ಯಾತ ಉಗ್ರ ಸಂಘಟನೆಯ ಪತ್ರಿಕೆಯಲ್ಲಿ ಪ್ರಕಟವಾಗಿದ್ದು, ಇದು ಉಗ್ರ ಸಂಘಟನೆಯ ದಾಳಿ ಸಂಚು ಎಂದು ಬಣ್ಣಿಸಲಾಗಿದೆ.

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ಮುರುಡೇಶ್ವರದಲ್ಲಿರುವ ಬೃಹತ್ ಶಿವನ ವಿಗ್ರಹದ ಶಿರವನ್ನು ಕತ್ತರಿಸಿದಂತೆ ಎಡಿಟ್ ಮಾಡಲಾದ ಫೋಟೊವನ್ನು ಉಗ್ರ ಸಂಘಟನೆ ಐಸಿಸ್ ಪತ್ರಿಕೆಯಲ್ಲಿ ಪ್ರಕಟಿಸಲಾಗಿದ್ದು,ಇದು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದೆ.

ಅಂಶುಲ್ ಸಕ್ಸೇನಾ ಎಂಬವರು ಈ ಪೋಸ್ಟ್ ಅನ್ನು ತಮ್ಮ ಖಾತೆಗಳಲ್ಲಿ ಪೋಸ್ಟ್ ಮಾಡಿ ಸರ್ಕಾರಗಳ ಗಮನ ಸೆಳೆಯಲು ಯತ್ನಿಸಿದ್ದಾರೆ. ‘ಐಸಿಸ್’ ಮುಖವಾಣಿ ಪತ್ರಿಕೆ ‘ದಿ ವಾಯ್ಸ್ ಆಫ್ ಹಿಂದ್ ನಲ್ಲಿ ಮುರುಡೇಶ್ವರದ ಶಿವನ ವಿಗ್ರಹವನ್ನು ಪ್ರಕಟಿಸಲಾಗಿದೆ.

ಅದರ ಮೇಲೆ ‘ಇದು ನಕಲಿ ದೇವರನ್ನು ಒಡೆಯುವ ಸಮಯ ಎಂಬ ವಾಕ್ಯವನ್ನು ಬರೆಯಲಾಗಿದ್ದು, ಶಿವನ ಪ್ರತಿಮೆಯನ್ನು ಅರ್ಧಕ್ಕೆ ಕತ್ತರಿಸಿ,ತಲೆಯ ಭಾಗದಲ್ಲಿ ಉಗ್ರ ಸಂಘಟನೆಯ ಮಾದರಿಯ ಧ್ವಜ ಹಾರಾಡುತ್ತಿರುವಂತೆ ಚಿತ್ರಿಸಲಾಗಿದೆ.

ಪೋಸ್ಟ್ ನ ಅಧಿಕೃತತೆ ಬಗ್ಗೆ ಇನ್ನೂ ಸ್ಪಷ್ಟನೆ ಸಿಕ್ಕಿಲ್ಲವಾದರೂ, ಈ ಕುರಿತು ಕೂಡಲೇ ಸುರಕ್ಷಾ ಕ್ರಮ ಕೈಗೊಳ್ಳಬೇಕು ಎಂದು ಅಂಶುಲ್ ಸಕ್ಸೇನಾ ತಮ್ಮ ಪೋಸ್ಟ್‌ನಲ್ಲಿ ಸರ್ಕಾರಗಳನ್ನು ಆಗ್ರಹಿಸಿದ್ದಾರೆ.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!