Tuesday, December 7, 2021
spot_img
Homeಜಿಲ್ಲಾದ. ಕ. ಜಿಲ್ಲಾಧಿಕಾರಿಗೆ ನಿಂದನೆ : ಜಗದೀಶ ಕಾರಂತ ವಿರುದ್ಧ ಪ್ರಕರಣ ದಾಖಲು

ದ. ಕ. ಜಿಲ್ಲಾಧಿಕಾರಿಗೆ ನಿಂದನೆ : ಜಗದೀಶ ಕಾರಂತ ವಿರುದ್ಧ ಪ್ರಕರಣ ದಾಖಲು

ಬಂಟ್ವಾಳ: ದ.ಕ. ಜಿಲ್ಲೆಯ ಇತಿಹಾಸ ಪ್ರಸಿದ್ಧ ಮಹಾತೋಬಾರ ಶ್ರೀ ಕ್ಷೇತ್ರ ಕಾರಿಂಜದ ವಠಾರದಲ್ಲಿ ನಡೆದ ರುದ್ರಗಿರಿಯ ರಣಕಹಳೆ ಕಾರ್ಯಕ್ರಮದಲ್ಲಿ ದ.ಕ. ಜಿಲ್ಲಾಧಿಕಾರಿ ಅವರನ್ನು ಅವಾಚ್ಯ ಶಬ್ಧಗಳಿಂದ ನಿಂದಿಸಿ ಅವಮಾನವೆಸಗಿರುವ ಪ್ರಕರಣ ಸಂಬಂಧ ಹಿಂದೂ ಜಾಗರಣ ವೇದಿಕೆಯ ಮುಖಂಡ ಜಗದೀಶ ಕಾರಂತ ವಿರುದ್ಧ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನ. 21ರಂದು ಮಂಗಳೂರು ಬಂಟ್ವಾಳ ತಾಲೂಕಿನ ಕಾವಳಮುಡೂರು ಗ್ರಾಮದ ಕಾರಿಂಜದಲ್ಲಿ ನಡೆದ ರುದ್ರಗಿರಿಯ ರಣಕಹಳೆ ಕಾರ್ಯಕ್ರಮದಲ್ಲಿ ಹಿಂದು ಜಾಗರಣಾ ವೇದಿಕೆಯ ಕ್ಷೇತ್ರೀಯ ಸಂಘಟನಾ ಕಾರ್ಯದರ್ಶಿ ಜಗದೀಶ ಕಾರಂತ ಜಿಲ್ಲಾಧಿಕಾರಿ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿ ಅಕ್ರಮ ಗಣಿಗಾರಿಕೆ ನಿಲ್ಲಿಸಲು ಜಿಲ್ಲಾಧಿಕಾರಿಗೆ 30 ದಿನಗಳ ಕಾಲಾವಕಾಶ ನೀಡುತ್ತಿದ್ದೇವೆ. ತಪ್ಪಿದ್ದಲ್ಲಿ ಡಿ. 21ರಂದು ಸಾವಿರಾರು ಜನರೊಂದಿಗೆ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿ, ಜಿಲ್ಲಾಧಿಕಾರಿಯ ಕೊರಳಪಟ್ಟಿಯನ್ನೇ ಹಿಡಿಯುತ್ತೇವೆ. ತಾಕತ್ತಿದ್ದರೆ ಗಣಿಗಾರಿಕೆ ನಿಲ್ಲಿಸು. ಇಲ್ಲದಿದ್ದರೆ ವರ್ಗಾವಣೆ ತೆಗೆದುಕೊಂಡು ಹೊರಗೆ ಹೋಗು ಎಂದು ಆರೋಪಿಸಿದ ವಿಚಾರಕ್ಕೆ ಸಂಬಂಧಿಸಿ ದ.ಕ. ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ಪುಂಜಾಲಕಟ್ಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!