Thursday, December 2, 2021
spot_img
Homeಸುದ್ದಿತನ್ನ ಕಾಲೇಜಿನಲ್ಲಿ ಎಬಿವಿಪಿ ರಾಜ್ಯ ಸಮ್ಮೇಳನಕ್ಕೆ ಅವಕಾಶ ನೀಡಿದವರಿಗೆ ಕಾಂಗ್ರೆಸ್ ಟಿಕೆಟ್: ದಿನೇಶ್ ಅಮೀನ್ ಮಟ್ಟು...

ತನ್ನ ಕಾಲೇಜಿನಲ್ಲಿ ಎಬಿವಿಪಿ ರಾಜ್ಯ ಸಮ್ಮೇಳನಕ್ಕೆ ಅವಕಾಶ ನೀಡಿದವರಿಗೆ ಕಾಂಗ್ರೆಸ್ ಟಿಕೆಟ್: ದಿನೇಶ್ ಅಮೀನ್ ಮಟ್ಟು ವ್ಯಂಗ್ಯ

ಉಡುಪಿ-ದಕ್ಷಿಣ ಕನ್ನಡ ದ್ವಿಸದಸ್ಯತ್ವ ಹೊಂದಿರುವ ಕ್ಷೇತ್ರದಲ್ಲಿ ವಿಧಾನ ಪರಿಷತ್ ಚುನಾವಣೆಗೆ ಮಂಗಳೂರಿನಿಂದ ಮಂಜುನಾಥ್ ಭಂಡಾರಿ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಿರುವುದು ಹೊಸ ಚರ್ಚೆಗೆ ಕಾರಣವಾಗಿದೆ. ಹಿರಿಯ ಪತ್ರಕರ್ತ , ಲೇಖಕ ದಿನೇಶ್ ಅಮೀನ್ ಮಟ್ಟು ಅವರು ಕಾಂಗ್ರೆಸ್ ನ ಈ ನಡೆಯನ್ನು ಪರೋಕ್ಷವಾಗಿ ಟೀಕಿಸಿ, ವ್ಯಂಗ್ಯವಾಡಿದ್ದಾರೆ.

​ಬುಧವಾರ ಫೇಸ್ ಬುಕ್ ಪೋಸ್ಟ್ ಹಾಕಿರುವ ದಿನೇಶ್ ಅಮೀನ್ ಮಟ್ಟು ​ ​” ​ಕರಾವಳಿಯ ಕೋಮುವಾದದ ವಿರುದ್ದ ಕಾಂಗ್ರೆಸ್ ಪಕ್ಷ ನಡೆಸಲಿರುವ ನಿರ್ಣಾಯಕ ಹೋರಾಟದ ನೇತೃತ್ವ ವಹಿಸಲು ವಿಧಾನ ಪರಿಷತ್ ಸದಸ್ಯರಾಗಿ ಹೊಸ ಸೇನಾಪತಿ ಆಗಮಿಸಲಿದ್ದಾರೆ. ಅವರ ಹೆಸರು ಮಂಜುನಾಥ ಭಂಡಾರಿ.​ ​ತಮ್ಮ ಕಾಲೇಜಿನಲ್ಲಿಯೇ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ರಾಜ್ಯ ಸಮ್ಮೇಳನವನ್ನು ಯಶಸ್ವಿಯಾಗಿ ನಡೆಸಿ ಸಂಘ ಪರಿವಾರದ ಅಂತರಂಗವನ್ನು ಚೆನ್ನಾಗಿ ಅರಿತಿರುವ ಕಾರಣದಿಂದಾಗಿ ಅದರ ವಿರುದ್ಧ ಹೋರಾಟಕ್ಕೆ ಇವರೇ ಸರಿ ಎಂದು ಕಾಂಗ್ರೆಸ್ ಪಕ್ಷ ತೀರ್ಮಾನಿಸಿದೆಯಂತೆ​” ಎಂದು ಬರೆದಿದ್ದಾರೆ. ​

ದಕ್ಷಿಣ ಕನ್ನಡ ಜಿಲ್ಲೆಯ ಕಾಂಗ್ರೆಸ್ ಟಿಕೆಟ್ ಗೆ ಭಾರೀ ಪೈಪೋಟಿ ಏರ್ಪಟ್ಟು ಕೊನೆಗೆ ಕಾಂಗ್ರೆಸ್ ಮುಖಂಡ, ಮಂಗಳೂರಿನ ಇಂಜಿನಿಯರಿಂಗ್ ಕಾಲೇಜೊಂದರ ಮಾಲಕ ಮಂಜುನಾಥ್ ಭಂಡಾರಿ ಅವರಿಗೆ ಪಕ್ಷ ಮಣೆ ಹಾಕಿದೆ. ಆದರೆ ಪಕ್ಷದ ಈ ನಡೆ ಈಗ ಟೀಕೆಗೆ ಒಳಗಾಗಿದೆ

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!