ನಕಲಿ ಎಟಿಎಂ ಕಾರ್ಡ್ ಬಳಸಿ ವಿವಿಧ ಬ್ಯಾಂಕ್‌ಗಳ ಎಟಿಎಂ ನಿಂದ ಹಣ ಡ್ರಾ ,ಪ್ರಕರಣ ದಾಖಲು

ಮಂಗಳೂರು: ನಕಲಿ ಎಟಿಎಂ ಕಾರ್ಡ್ ಬಳಸಿ ವಿವಿಧ ಬ್ಯಾಂಕ್‌ಗಳಿಂದ ಹಂತವಾಗಿ 1,88,800 ರೂ. ಡ್ರಾ ಮಾಡಿ ವಂಚಿಸಿದ ಬಗ್ಗೆ ಮಂಗಳೂರು ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾರ್ ಸ್ಟ್ರೀಟ್‌ನಲ್ಲಿರುವ ವಿಶ್ವಕರ್ಮ ಸಹಕಾರ ಬ್ಯಾಂಕಿನ ಎಟಿಎಂನಿಂದ ಹಣ ಡ್ರಾ ಮಾಡಲಾಗಿದೆ.

ನ.20ರಂದು ಆರೋಪಿಯು ಎಟಿಎಂಗೆ ಬಂದು ಹಣ ಡ್ರಾ ಮಾಡಿದ್ದು, ಸಂಶಯಗೊಂಡ ವಾಚ್‌ ಮ್ಯಾನ್ ಆತನನ್ನು ಹಿಡಿಯಲು ಯತ್ನಿಸಿದಾಗ ತಪ್ಪಿಸಿಕೊಂಡು ಪರಾರಿಯಾಗಿದ್ದಾನೆ ಎನ್ನಲಾಗಿದೆ.

ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

















































error: Content is protected !!
Scroll to Top