Thursday, December 2, 2021
spot_img
Homeಸುದ್ದಿಕಾರ್ಕಳ : ಜುಗಾರಿ ಆಡುತ್ತಿದ್ದ ವ್ಯಕ್ತಿ ಪೊಲೀಸ್ ವಶಕ್ಕೆ

ಕಾರ್ಕಳ : ಜುಗಾರಿ ಆಡುತ್ತಿದ್ದ ವ್ಯಕ್ತಿ ಪೊಲೀಸ್ ವಶಕ್ಕೆ

ಕಾರ್ಕಳ : ತಾಲೂಕಿನ ನಿಟ್ಟೆ ಗ್ರಾಮದಲ್ಲಿ ಜುಗಾರಿ ಆಡುತ್ತಿದ್ದ ವ್ಯಕ್ತಿಯೊಬ್ಬನನ್ನು ಕಾರ್ಕಳ ಗ್ರಾಮಾಂತರ ಪೊಲೀಸರು ಬಂಧಿಸಿದ ಬಗ್ಗೆ ವರದಿಯಾಗಿದೆ.

ತೆಳ್ಳಾರು ನಿವಾಸಿ ಉಮಾನಾಥ (36) ಎಂಬಾತ ಬಂಧಿತ ಆರೋಪಿ.
ಈ ವ್ಯಕ್ತಿ ನ.25 ರಂದು ಕಾರ್ಕಳ ತಾಲೂಕಿನ ನಿಟ್ಟೆ ಗ್ರಾಮದ ದೂಪದಕಟ್ಟೆ ರಿಕ್ಷಾ ನಿಲ್ದಾಣದ ಬಳಿ ಸಾರ್ವಜನಿಕರಿಂದ ಹಣವನ್ನು ಪಡೆದು,ಅದನ್ನು ಪಣವಾಗಿಟ್ಟು ಮಟ್ಕಾ ಜುಗಾರಿ ಆಟ ಆಡುತ್ತಿದ್ದ ಎನ್ನಲಾಗಿದೆ.

ಖಚಿತ ಮಾಹಿತಿ ಪಡೆದ ಕಾರ್ಕಳ ಗ್ರಾಮಾಂತರ ಠಾಣೆ ಪಿಎಸ್ಐ ಸಿಬ್ಬಂಧಿಯವರೊಂದಿಗೆ ಸ್ಥಳಕ್ಕೆ ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.

ಆರೋಪಿಯಿಂದ ರೂಪಾಯಿ 2140/- ನಗದು, ಮಟ್ಕಾ ಬರೆದ ಚೀಟಿ ಮತ್ತು ಬಾಲ್‌ ಪೆನ್‌ ಪಡೆದುಕೊಳ್ಳಲಾಗಿದೆ.

ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!