ನವದೆಹಲಿ : ತೈಲೋತ್ಪನ್ನಗಳ ದರ ಏರಿಕೆ ಬಿಸಿ ನಡುವೆಯೇ ವಾಣಿಜ್ಯ ಬಳಕೆಯ ಎಲ್.ಪಿ.ಜಿ ಸಿಲಿಂಡರ್ ಬೆಲೆಯಲ್ಲೂ ಏರಿಕೆ ಕಂಡುಬಂದಿದೆ. ಸಿಲಿಂಡರ್ ಬೆಲೆಯಲ್ಲಿ ರೂ. 100 ಏರಿಕೆಯಾಗಿದೆ. ಡಿಸೆಂಬರ್ 1, 2021ರಿಂದ ವಾಣಿಜ್ಯ ಬಳಕೆಯ ಸಿಲಿಂಡರ್ ದರವನ್ನು ಮತ್ತೆ ಹೆಚ್ಚಿಸಲಾಗಿದ್ದು, ಪ್ರತೀ 19 ಕೆ.ಜಿ.ಯ ವಾಣಿಜ್ಯ ಸಿಲಿಂಡರ್ ಬೆಲೆಯನ್ನು ತಲಾ 100 ರೂ. ಹೆಚ್ಚಳ ಮಾಡಲಾಗಿದೆ. ಬೆಲೆ ಹೆಚ್ಚಳದ ನಂತರ 19 ಕೆ.ಜಿ.ಯ ವಾಣಿಜ್ಯ ಸಿಲಿಂಡರ್ ಈಗ ದೆಹಲಿಯಲ್ಲಿ 2101 ರೂ., ಮುಂಬೈನಲ್ಲಿ ಎಲ್‌ಪಿಜಿ ವಾಣಿಜ್ಯ ಸಿಲಿಂಡರ್‌ನ ಬೆಲೆ 2,051 ರೂ., ಕೋಲ್ಕತ್ತಾದಲ್ಲಿ 2,174.50 ರೂ., ಚೆನ್ನೈನಲ್ಲಿ ಎಲ್‌ಪಿಜಿ ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆ 2,234.50 ಆಗಿದೆ.
ನವೆಂಬರ್ 1ರಂದು ಎಲ್‌ಪಿಜಿ ವಾಣಿಜ್ಯ ಸಿಲಿಂಡರ್‌ನ ಬೆಲೆಯನ್ನು 266 ರೂಪಾಯಿಯಿಂದ 2000.50 ರೂ.ಗೆ ಹೆಚ್ಚಿಸಲಾಗಿತ್ತು. ನವೆಂಬರ್ 1ರ ಹೆಚ್ಚಳಕ್ಕೆ ಮೊದಲು, ರಾಷ್ಟ್ರ ರಾಜಧಾನಿಯಲ್ಲಿ ಎಲ್‌ಪಿಜಿ ವಾಣಿಜ್ಯ ಸಿಲಿಂಡರ್ ಬೆಲೆ 1734 ರೂಪಾಯಿ ಇತ್ತು. ಆದರೆ, ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯಲ್ಲಿ ಯಾವುದೇ ಹೆಚ್ಚಳವಾಗಿಲ್ಲ.















































