ಕಾರ್ಕಳ : ಕಾರ್ಕಳ ಪುರಸಭಾ ಕಚೇರಿಯಲ್ಲಿ ಹಿರಿಯ ನಾಗರೀಕರು ಮತ್ತು ಸಾರ್ವಜನಿಕರಿಗೆ ಅನುಕೂಲವಾಗುವಂತೆ ಸ್ವಯಂ ಘೋಷಿತ ಆಸ್ತಿ ತೆರಿಗೆ, ನೀರಿನ ಶುಲ್ಕ, ಉದ್ಯಮ ಪರವಾನಿಗೆ ಶುಲ್ಕ ಹಾಗೂ ನಗರ ಯೋಜನಾ ಪ್ರಾಧಿಕಾರಕ್ಕೆ ಪಾವತಿಸ ಬೇಕಾಗಿರುವ ಶುಲ್ಕ ಪಾವತಿಸಲು ಪುರಸಭಾ ಕಚೇರಿಯಲ್ಲಿ HDFC ಬ್ಯಾಂಕ್ ಶಾಖೆಯ ಕೌಂಟರನ್ನು ತೆರೆಯಲಾಗಿದೆ. ಸಾರ್ವಜನಿಕರು ಇದರ ಪ್ರಯೋಜನ ಪಡೆದುಕೊಳ್ಳುವಂತೆ ಪುರಸಭಾ ಅಧ್ಯಕ್ಷೆ ಸುಮಾ ಕೇಶವ, ಮುಖ್ಯಾಧಿಕಾರಿ ರೂಪಾ ಟಿ. ಶೆಟ್ಟಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಪುರಸಭಾ ಕಚೇರಿಯಲ್ಲಿ ಎಚ್‌ಡಿಎಫ್‌ಸಿ ಬ್ಯಾಂಕ್ ಕೌಂಟರ್ ಆರಂಭ















































