Wednesday, January 26, 2022
spot_img
Homeಸ್ಥಳೀಯ ಸುದ್ದಿಪ್ರಥಮ ಪ್ರಾಶಸ್ತ್ಯದ ಮತದಿಂದಲೇ ಕಾಂಗ್ರೆಸ್ ಅಭ್ಯರ್ಥಿ ಗೆಲುವು ಖಚಿತ : ಭರತ್ ಮುಂಡೋಡಿ

ಪ್ರಥಮ ಪ್ರಾಶಸ್ತ್ಯದ ಮತದಿಂದಲೇ ಕಾಂಗ್ರೆಸ್ ಅಭ್ಯರ್ಥಿ ಗೆಲುವು ಖಚಿತ : ಭರತ್ ಮುಂಡೋಡಿ


ಕಾರ್ಕಳ : ವಿಧಾನ ಪರಿಷತ್ ಚುನಾವಣೆಯಲ್ಲಿ ಪ್ರಥಮ ಪ್ರಾಶಸ್ತ್ಯದ ಮತಗಳಿಂದಲೇ ಕಾಂಗ್ರೆಸ್ ಅಭ್ಯರ್ಥಿ ಮಂಜುನಾಥ ಭಂಡಾರಿ ಗೆಲುವು ಖಚಿತ ಎಂದು ರಾಜ್ಯ ಕೆಪಿಸಿಸಿ ವಕ್ತಾರ ಹಾಗೂ ಕಾರ್ಕಳ ವಿಧಾನ ಸಭಾ ಕ್ಷೇತ್ರದ ಚುನಾವಣಾ ಉಸ್ತುವಾರಿ ಭರತ್ ಮುಂಡೋಡಿ ಆತ್ಮವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಅವರು ಗುರುವಾರ ಕಾರ್ಕಳ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ, ಸುಮಾರು 6 ಸಾವಿರ ಸ್ಥಳೀಯಾಡಳಿತ ಸದಸ್ಯರ ಮತಗಳ ಪೈಕಿ 1885 ಕಾಂಗ್ರೆಸ್ ಬೆಂಬಲಿತ ಮತಗಳಿದ್ದು, ಕಾರ್ಕಳ ವಿಧಾನ ಸಭಾ ಕ್ಷೇತ್ರದಲ್ಲಿ ಪುರಸಭೆ ವ್ಯಾಪ್ತಿಯಲ್ಲಿ 11 ಮತಗಳು ಹಾಗೂ ಗ್ರಾ.ಪಂ. ಸದಸ್ಯರ ಪೈಕಿ 99 ಸೇರಿದಂತೆ ಒಟ್ಟು 110 ಕಾಂಗ್ರೆಸ್ ಬೆಂಬಲಿತ ಮತಗಳ ಜತೆಗೆ 24 ಪಕ್ಷೇತರ ಮತಗಳಿದ್ದು, ಅವರಲ್ಲಿಯೂ ಕಾಂಗ್ರೆಸ್ ಬೆಂಬಲಿಸುವಂತೆ ಮನವಿ ಮಾಡಲಾಗಿದೆ.

ಬೆಲೆ ಏರಿಕೆ ಅಸಮಾಧಾನ
ಬೆಲೆ ಏರಿಕೆಯ ಪರಿಣಾಮ ಬಿಜೆಪಿ ಬೆಂಬಲಿತ ಸದಸ್ಯರಲ್ಲೂ ಅಸಮಾಧಾನ ವ್ಯಕ್ತವಾಗುತ್ತಿದ್ದು, ಇದು ಕಾಂಗ್ರೆಸ್ ಪಾಲಿಗೆ ವರದಾನವಾಗಲಿದೆ ಎಂದರು. ಎಸ್‍ಡಿಪಿಐ ಸ್ಪರ್ಧೆ ಕೇವಲ ನಾಮಕಾವಸ್ಥೆಯ ಸ್ಪರ್ಧೆಯಾಗಿದ್ದು, 192 ಮತಗಳನ್ನು ಮಾತ್ರ ಪಡೆಯುವಲ್ಲಿ ಶಕ್ತವಾಗಿದೆ ಎಂದು ಭರತ್‌ ಮುಂಡೋಡಿ ಅಭಿಪ್ರಾಯಪಟ್ಟರು.

ವಿಧಾನ ಪರಿಷತ್ ಅಭ್ಯರ್ಥಿಗಳ ಪೈಕಿ ಮಂಜುನಾಥ ಭಂಡಾರಿ ಅವರು ಪಂಚಾಯತ್‍ರಾಜ್ ವ್ಯವಸ್ಥೆ ಕುರಿತು ಪ್ರಬಂಧ ಮಂಡಿಸಿ ಪಿಎಚ್‍ಡಿ ಪದವಿ ಪಡೆದವರು. ಅವರಂತಹ ಸಮರ್ಥ ಅಭ್ಯರ್ಥಿಗಳು ಬೇರೋಬ್ಬರಿಲ್ಲ. ಅವರ ಆಯ್ಕೆಯಿಂದ ಪಂಚಾಯತ್‍ರಾಜ್ ವ್ಯವಸ್ಥೆ ಇನ್ನಷ್ಟು ಬಲವರ್ಧನೆಗೊಳ್ಳಲಿದೆ ಎಂದರು.
ದೇಶದಲ್ಲಿ ಬಿಜೆಪಿ ವರ್ಚಸ್ಸು ದಿನದಿಂದ ದಿನಕ್ಕೆ ಕುಸಿಯುತ್ತಿದ್ದು, ಕಾಂಗ್ರೆಸ್ ಪರ ಉತ್ತಮ ವಾತಾವರಣವಿದೆ. ಮುಂದಿನ ಎಲ್ಲಾ ಚುನಾವಣೆಗಳಲ್ಲೂ ಮತದಾರರು ಕಾಂಗ್ರೆಸ್ ಪರ ನಿಲ್ಲಲಿದ್ದಾರೆ. ಕಳೆದ ಹಲವು ವರ್ಷಗಳಿಂದ ಪರಿಹಾರ ಕಂಡುಕೊಳ್ಳಲಾಗದ ಡೀಮ್ಡ್ ಅರಣ್ಯ ಸಮಸ್ಯೆಯಿಂದ ಸಾವಿರಾರು ಬಡವರು ನಿವೇಶನ ವಂಚಿತರಾಗಿದ್ದು, ಬಿಜೆಪಿಯ ಮೇಲಿದ್ದ ವಿಶ್ವಾಸವನ್ನು ಜನತೆ ಕಳೆದುಕೊಂಡಿದ್ದಾರೆ ಎಂದರು.
ಸುದ್ದಿಗೋಷ್ಟಿ ಯಲ್ಲಿ ಹೆಬ್ರಿ ಬ್ಲಾಕ್ ಕಾಂಗ್ರೆಸ್ ಚುನಾವಣಾ ಉಸ್ತುವಾರಿ ಫಾರೂಕ್ ಫರಂಗಿಪೇಟೆ, ಕಾರ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸದಾಶಿವ ದೇವಾಡಿಗ, ಹೆಬ್ರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ ಪ್ರಜಾರಿ, ಜಿಲ್ಲಾ ಕಾಂಗ್ರೆಸ್ ವಕ್ತಾರ ಬಿಪಿನ್ ಚಂದ್ರ ಪಾಲ್, ಜಾರ್ಜ್ ಕ್ಯಾಸ್ಟಲಿನೋ, ಪ್ರಭಾಕರ ಬಂಗೇರ ಮುಂತಾದವರಿದ್ದರು.

>

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!