ಕಾರ್ಕಳ : ಮಿಯ್ಯಾರು ಕಂಬಳ ಸಮಿತಿ ಮತ್ತು ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್ ಸಹಯೋಗದೊಂದಿಗೆ ಡಿ. 18ರಂದು ಮಿಯ್ಯಾರು ಲವ ಕುಶ ಜೋಡುಕರೆ ಬಯಲು ಕಂಬಳ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಡಿ. 3ರಂದು ಮಿಯ್ಯಾರಿನಲ್ಲಿ ಕಂಬಳ ಸಮಿತಿ ಸಭೆ ನಡೆಯಿತು.
ಡಿ. 18ರ ಶನಿವಾರದಂದು ಪೂರ್ವಾಹ್ನ 8 ಗಂಟೆಗೆ ಕಂಬಳ ಸಮಿತಿ ಅಧ್ಯಕ್ಷ, ಸಚಿವ ವಿ. ಸುನಿಲ್ ಕುಮಾರ್ ಕಂಬಳಕ್ಕೆ ಚಾಲನೆ ನೀಡಲಿರುವರು.
ಮಿಯ್ಯಾರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ಹರಿದಾಸ್ ಭಟ್, ಮಿಯ್ಯಾರು ಚರ್ಚ್ ಧರ್ಮಗುರು ರೆ. ಫಾ. ಪಾವುಲ್ ರೇಗೋ, ಮಿಯ್ಯಾರು ಜಾಮೀಯ ಮಸೀದಿ ಧರ್ಮಗುರು ಮೌಲನಾ ರಾಜಿಕ್ ಅಹಮದ್ ಉಪಸ್ಥಿತರಿರುವರು.
ಬಹುಮಾನ ವಿತರಣಾ ಕಾರ್ಯಕ್ರಮ
ನವೋದಯ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ, ಎಸ್ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ. ಎಂ. ಎನ್. ರಾಜೇಂದ್ರ ಕುಮಾರ್, ಮಿಯ್ಯಾರು ಕಂಬಳ ಸಮಿತಿ ಕಾರ್ಯಾಧ್ಯಕ್ಷ ಜೀವನ್ದಾಸ್ ಅಡ್ಯಂತಾಯ, ಎಸ್ಸಿಡಿಸಿಸಿ ಬ್ಯಾಂಕ್ ನಿರ್ದೇಶಕ ಭಾಸ್ಕರ್ ಎಸ್. ಕೋಟ್ಯಾನ್ ಬಹುಮಾನ ವಿತರಿಸಲಿದ್ದಾರೆ.
ಸಭಾ ಕಾರ್ಯಕ್ರಮ
ಸಂಜೆ 7 ಗಂಟೆಗೆ ನಡೆಯಲಿರುವ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಚಿವ ವಿ. ಸುನೀಲ್ ಕುಮಾರ್ ವಹಿಸಲಿದ್ದು, ಕೇಂದ್ರ ಸಚಿವೆ ಕು. ಶೋಭಾ ಕರಂದ್ಲಾಜೆ, ಸಚಿವ ಕೋಟ ಶ್ರೀನಿವಾಸ ಪೂಜಾರಿ, ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಯ್ಲಿ, ಮೂಡಬಿದ್ರೆ ಶಾಸಕ ಉಮಾನಾಥ ಕೋಟ್ಯಾನ್, ಎಸ್ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ. ಎಂ. ಎನ್. ರಾಜೇಂದ್ರ ಕುಮಾರ್, ಮಾಜಿ ಸಚಿವರಾದ ಕೆ. ಅಭಯಚಂದ್ರ ಜೈನ್, ವಿಧಾನ ಪರಿಷತ್ ಮಾಜಿ ಸದಸ್ಯ ಕ್ಯಾ. ಗಣೇಶ್ ಕಾರ್ಣಿಕ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ, ಗೇರು ನಿಗಮದ ಅಧ್ಯಕ್ಷ ಮಣಿರಾಜ ಶೆಟ್ಟಿ, ಕಾರ್ಕಳ ತಹಶೀಲ್ದಾರ್ ಕೆ. ಪುರಂದರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕುಮಾರ್ ಬಿ. ಬೆಕ್ಕರಿ, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಗುರುದತ್, ಕಾರ್ಕಳ ಡಿವೈಎಸ್ಪಿ ವಿಜಯ್ ಪ್ರಸಾದ್, ಮಿಯ್ಯಾರು ಗ್ರಾ.ಪಂ. ಅಧ್ಯಕ್ಷ ಗಿರೀಶ್ ಅಮೀನ್, ಎಪಿಎಂಸಿ ಅಧ್ಯಕ್ಷ ರತ್ನಾಕರ ಅಮೀನ್ ಸೇರಿದಂತೆ ಹಲವಾರು ಗಣ್ಯರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ.