Wednesday, January 26, 2022
spot_img
HomeUncategorizedದತ್ತಪೀಠದ ಗೋರಿಗಳನ್ನು ಸ್ಥಳಾಂತರಿಸುವಂತೆ ಬಜರಂಗದಳ ಪ್ರಾಂತ ಸಂಚಾಲಕ ಸುನಿಲ್‌ ಕೆ.ಆರ್.‌ ಆಗ್ರಹ

ದತ್ತಪೀಠದ ಗೋರಿಗಳನ್ನು ಸ್ಥಳಾಂತರಿಸುವಂತೆ ಬಜರಂಗದಳ ಪ್ರಾಂತ ಸಂಚಾಲಕ ಸುನಿಲ್‌ ಕೆ.ಆರ್.‌ ಆಗ್ರಹ

ಡಿ. 12 : ಕಾರ್ಕಳದಲ್ಲಿ ಹಿಂದೂ ಸಂಗಮ

ಕಾರ್ಕಳ : ವಿಶ್ವ ಹಿಂದೂ ಪರಿಷತ್, ಬಜರಂಗದಳ ಕಾರ್ಕಳ ಪ್ರಖಂಡದ ವತಿಯಿಂದ ಡಿ. 12ರಂದು ಕಾರ್ಕಳ ಗಾಂಧಿ ಮೈದಾನದಲ್ಲಿ ಹಿಂದೂ ಸಂಗಮ ಕಾರಕ್ರಮ ನಡೆಯಲಿದೆ ಎಂದು ಬಜರಂಗದಳ ಪ್ರಾಂತ ಸಂಚಾಲಕ ಸುನಿಲ್‌ ಕೆ.ಆರ್.‌ ಹೇಳಿದರು.

ದತ್ತ ಜಯಂತಿ ಪ್ರಯುಕ್ತ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಅಂದು ಸ್ವರಾಜ್ ಮೈದಾನದಿಂದ ಗಾಂಧಿ ಮೈದಾನದವರೆಗೆ ಮೆರವಣಿಗೆ ಸಾಗಲಿದೆ. ಸಾಧ್ವಿ ಸರಸ್ವತಿ ದಿಕ್ಸೂಚಿ ಭಾಷಣ ಮಾಡಲಿರುವರು. ಪೇಜಾವರದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ, ಆನೆಗುಂದಿ ಮಹಾಸಂಸ್ಥಾನದ ಕಾಳ ಹಸ್ತೇಂದ್ರ ಸ್ವಾಮೀಜಿ ಆಶೀರ್ವಚನ ನೀಡಲಿರುವರು. ವಿಶ್ವ ಹಿಂದೂ ಪರಿಷತ್ತಿನ ಕರ್ನಾಟಕ ದಕ್ಷಿಣ ಪ್ರಾಂತದ ಅಧ್ಯಕ್ಷರು ಅಧ್ಯಕ್ಷತೆ ವಹಿಸಲಿದ್ದಾರೆ ಎಂದವರು ತಿಳಿಸಿದರು.

ದತ್ತಪೀಠದ ಗೋರಿಗಳನ್ನು ಸ್ಥಳಾಂತರಿಸುವಂತೆ ಆಗ್ರಹ
ದತ್ತಾತ್ರೇಯ ದೇವರ ಪವಿತ್ರ ಕ್ಷೇತ್ರವಾಗಿರುವ ದತ್ತಪೀಠ ಹಿಂದುಗಳ ತೀರ್ಥಕ್ಷೇತ್ರವಾಗಬೇಕು. ಅಲ್ಲಿ ಹಿಂದೂ ಅರ್ಚಕರ ನೇಮಕವಾಗಬೇಕು. ಅಲ್ಲಿರುವ ಗೋರಿಗಳನ್ನು ಸ್ಥಳಾಂತರಿಸಬೇಕು ಎಂದು ಸುನಿಲ್‌ ಕೆ.ಆರ್.‌ ಆಗ್ರಹಿಸಿದರು. ಪತ್ರಿಕಾಗೋಷ್ಠಿಯಲ್ಲಿ ವಿಶ್ವ ಹಿಂದೂ ಪರಿಷತ್‌ ತಾಲೂಕು ಅಧ್ಯಕ್ಷ ಭಾಸ್ಕರ್ ಎಸ್. ಕೋಟ್ಯಾನ್‌, ಬಜರಂಗದಳ ಸಂಯೋಜಕ ಚೇತನ್ ಪೇರಾಲ್ಕೆ, ವಿಶ್ವ ಹಿಂದೂ ಪರಿಷತ್‌ ಕಾರ್ಯದರ್ಶಿ ಸುಧೀರ್ ನಿಟ್ಟೆ, ಹರಿಪ್ರಸಾದ್ ಬಜಗೋಳಿ ಉಪಸ್ಥಿತರಿದ್ದರು.

>

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!