Wednesday, January 26, 2022
spot_img
Homeಕ್ರೀಡೆ2ನೇ ಟೆಸ್ಟ್‌ : ಕಿವೀಸ್‌ ವಿರುದ್ಧ 1-0 ಅಂತರದಲ್ಲಿ ಟೆಸ್ಟ್‌ ಸರಣಿ ಗೆದ್ದ ಟೀಮ್‌ ಇಂಡಿಯಾ

2ನೇ ಟೆಸ್ಟ್‌ : ಕಿವೀಸ್‌ ವಿರುದ್ಧ 1-0 ಅಂತರದಲ್ಲಿ ಟೆಸ್ಟ್‌ ಸರಣಿ ಗೆದ್ದ ಟೀಮ್‌ ಇಂಡಿಯಾ

ಮುಂಬೈ: ಬ್ಯಾಟಿಂಗ್‌ ಹಾಗೂ ಬೌಲಿಂಗ್‌ ಎರಡರಲ್ಲೂ ಸಂಘಟಿತ ಪ್ರದರ್ಶನ ತೋರಿದ ಟೀಮ್‌ ಇಂಡಿಯಾ ಎರಡನೇ ಟೆಸ್ಟ್ ಪಂದ್ಯದಲ್ಲಿ ನ್ಯೂಜಿಲೆಂಡ್‌ ವಿರುದ್ಧ 372 ರನ್‌ಗಳ ಭರ್ಜರಿ ಜಯ ಗಳಿಸಿತು. ಆ ಮೂಲಕ ಎರಡು ಪಂದ್ಯಗಳ ಟೆಸ್ಟ್ ಸರಣಿಯನ್ನು ಟೀಮ್‌ ಇಂಡಿಯಾ 1-0 ಅಂತರದಲ್ಲಿ ಮುಡಿಗೇರಿಸಿಕೊಂಡಿತು.

ಇಲ್ಲಿನ ವಾಂಖೆಡೆ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್‌ ಪಂದ್ಯದಲ್ಲಿ ಗೆಲುವಿನ ಸನಿಹದಲ್ಲಿದೆ. ಎರಡು ಪಂದ್ಯಗಳ ಟೆಸ್ಟ್ ಸರಣಿ ಗೆಲ್ಲಲು ಭಾರತ ತಂಡಕ್ಕೆ ಸೋಮವಾರ ಕೇವಲ 5 ವಿಕೆಟ್‌ ಅಗತ್ಯವಿದೆ.

ಮಳೆ ಕಾಟದ ನಡುವೆಗೂ ಟಾಸ್‌ ಗೆದ್ದು ಬ್ಯಾಟಿಂಗ್‌ ಆಯ್ಕೆ ಮಾಡಿದ್ದ ಭಾರತ ತಂಡ ಮೊದಲ ಇನಿಂಗ್ಸ್‌ನಲ್ಲಿ 325 ರನ್‌ ಗಳಿಸಿ, ಬಳಿಕ ಕಿವೀಸ್‌ ಪಡೆಯನ್ನು ಪ್ರಥಮ ಇನಿಂಗ್ಸ್‌ನಲ್ಲಿ 62 ರನ್‌ಗಳ ಅಲ್ಪ ಮೊತ್ತಕ್ಕೆ ಆಲ್‌ಔಟ್‌ ಮಾಡಿತು.

ಫಾಲೋ ಆನ್‌ ಹೇರದೆ ಎರಡನೇ ಇನಿಂಗ್ಸ್‌ ಬ್ಯಾಟಿಂಗ್‌ ಆರಂಭಿಸಿದ ಭಾರತ ತಂಡ ಮೂರನೇ ದಿನ 70 ಓವರ್‌ಗಳಲ್ಲಿ 7 ವಿಕೆಟ್‌ಗೆ 276 ರನ್‌ಗಳಿಸಿ ಡಿಕ್ಲೇರ್‌ ಮಾಡಿಕೊಂಡಿತು. ಈ ಮೂಲಕ ಎದುರಾಳಿಗೆ 540 ರನ್‌ಗಳ ಅಸಾಧ್ಯದ ಗುರಿ ನೀಡಿದೆ. ಗುರಿ ಬೆನ್ನತ್ತಿದ ಕಿವೀಸ್‌ 3ನೇ ದಿನದ ಅಂತ್ಯಕ್ಕೆ 5 ವಿಕೆಟ್‌ಗಳ ನಷ್ಟದಲ್ಲಿ 140 ರನ್‌ಗಳನ್ನು ಗಳಿಸಿದೆ.

>

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!