Wednesday, January 26, 2022
spot_img
Homeಜಿಲ್ಲಾಮಂಗಳೂರಿನ ಒಂದೇ ಕಾಲೇಜಿನ 15 ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್

ಮಂಗಳೂರಿನ ಒಂದೇ ಕಾಲೇಜಿನ 15 ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್

ಮಂಗಳೂರು: ಕಡಲ ನಗರಿ ಮಂಗಳೂರಿನಲ್ಲಿ ಮತ್ತೊಮ್ಮೆ ಕೊರನಾ ಅಲೆ ಆತಂಕ ತಂದಿಟ್ಟಿದೆ. ದ. ಕ. ಜಿಲ್ಲೆಯಲ್ಲಿ ನಾನಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ಕಾಣಿಸಿಕೊಳ್ಳುತ್ತಿದೆ. ಅದರಲ್ಲೂ ಮಂಗಳೂರಿನ ಎಂ.ವಿ. ಶೆಟ್ಟಿ ಕಾಲೇಜಿನಲ್ಲಿ 15 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ಬಂದಿರುವುದು ದೃಢಪಟ್ಟಿದೆ. ಹಾಗಾಗಿ ಕಾಲೇಜನ್ನು ಆರೋಗ್ಯ ಇಲಾಖೆ ಕಂಟೇನ್ಮೆಂಟ್​ ಮಾಡಿದೆ. 10 ದಿನದಲ್ಲಿ 21 ಜನ ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್ ಆಗಿದೆ.

ತುಮಕೂರು ಜಿಲ್ಲೆಯಲ್ಲಿ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಕೇರಳದಿಂದ‌ ಬಂದ ಎಲ್ಲಾ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳಿಗೆ ಕೊರೊನಾ ಟೆಸ್ಟ್ ಮಾಡಿಸಲಾಗಿದೆ. ಮೂರೂ‌ ಕಾಲೇಜಿನ ನರ್ಸಿಂಗ್ ವಿದ್ಯಾರ್ಥಿಗಳಲ್ಲಿ ಕೊರೊನಾ ಪತ್ತೆಯಾಗಿದೆ. ಇದರೊಂದಿಗೆ ತುಮಕೂರು ಜಿಲ್ಲೆಯಲ್ಲಿ ಒಟ್ಟು 23 ಕೇರಳ ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್ ಇದೆ. ಅರುಣ ನರ್ಸಿಂಗ್ ಕಾಲೇಜಿನಲ್ಲಿ 3 ಮಂದಿಗೆ, ಸಿದ್ದಗಂಗಾ ನರ್ಸಿಂಗ್ ಕಾಲೇಜಿನಲ್ಲಿ 8 ಮಂದಿಗೆ ಮತ್ತು ವರದರಾಜ ಕಾಲೇಜಿನಲ್ಲಿ 12 ಸೇರಿದಂತೆ ಒಟ್ಟು 23 ಕೇಸ್​ಗಳು ಪತ್ತೆಯಾಗಿವೆ. ಜಿಲ್ಲೆಯಲ್ಲಿ ಒಟ್ಟಾರೆ ಕಳೆದ 10 ದಿನಗಳಲ್ಲಿ 109 ಕೇಸ್ಗಳು ಬಂದಿವೆ.

ಸಿದ್ದಗಂಗಾ ನರ್ಸಿಂಗ್ ಕಾಲೇಜಿನಲ್ಲಿ 214 ವಿದ್ಯಾರ್ಥಿಗಳಿಗೆ ಟೆಸ್ಟ್ ಮಾಡಿಸಲಾಗಿತ್ತು, ಇದರಲ್ಲಿ 8 ಜನರಿಗೆ ಸೋಂಕು ತಗುಲಿದೆ. ವರದರಾಜ ಕಾಲೇಜಿನಲ್ಲಿ 138 ವಿದ್ಯಾರ್ಥಿಗಳಿಗೆ ಟೆಸ್ಟ್ ಮಾಡಿಸಲಾಗಿದೆ. ಇದರಲ್ಲಿ 12 ವಿದ್ಯಾರ್ಥಿಗಳಿಗೆ ಪಾಸಿಟೀವ್ ಬಂದಿದೆ. ಅರುಣ ನರ್ಸಿಂಗ್ ಕಾಲೇಜಿನಲ್ಲಿ 161 ವಿದ್ಯಾರ್ಥಿಗಳಿಗೆ ಟೆಸ್ಟ್ ಮಾಡಿಸಲಾಯಿತು, ಅಲ್ಲಿಯೂ ಮೂವರಿಗೆ ಸೋಂಕು ತಗುಲಿದೆ. ಪೆರುಮನಹಳ್ಳಿ ಗ್ರಾಮದಲ್ಲಿ 11 ಜನರಿಗೆ ಪಾಸಿಟಿವ್ ಬಂದಿತ್ತು. ಅವರೆಲ್ಲರೂ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆಯ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದವರು. ಬಳಿಕ ಅವರಿಗೆಲ್ಲಾ ಸೋಂಕು ಬಂದಿದೆ.

>

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!