Wednesday, January 26, 2022
spot_img
Homeಸ್ಥಳೀಯ ಸುದ್ದಿಐವರ ಮೇಲೆ ತಲವಾರು-ರಾಡ್‌ನಿಂದ ಹಲ್ಲೆ

ಐವರ ಮೇಲೆ ತಲವಾರು-ರಾಡ್‌ನಿಂದ ಹಲ್ಲೆ

ಉಪ್ಪಿನಂಗಡಿ : ಇಳಂತಿಲ ಗ್ರಾಮದ ಅಂಡೆತ್ತಡ್ಕದಲ್ಲಿ ಭಾನುವಾರ ರಾತ್ರಿ ತಂಡವೊಂದು ಐವರ ಮೇಲೆ ತಲವಾರು ಹಾಗೂ ರಾಡ್‍ನಿಂದ ಹಲ್ಲೆ ನಡೆಸಿದ ಘಟನೆಯ ಕುರಿತಾಗಿ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಎರಡು ಪ್ರಕರಣಗಳು ದಾಖಲಾಗಿದ್ದು, ತಲೆಮರೆಸಿಕೊಂಡಿರುವ ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.
ಈ ಬಗ್ಗೆ ದೂರು ನೀಡಿರುವ ಮುಹಮ್ಮದ್ ಫಯಾಝ್ ಎಂಬವರು ತಾನು ಭಾನುವಾರ ಸಂಜೆ 7:30ರ ವೇಳೆಗೆ ಅಂಡೆತ್ತಡ್ಕದಲ್ಲಿರುವ ಮಂಜುಶ್ರೀ ಸ್ಟೋರ್‍ಗೆ ತನ್ನ ಸ್ನೇಹಿತ ಅಫೀಝ್‍ನೊಂದಿಗೆ ದಿನಸಿ ಖರೀದಿ ಮಾಡಲು ತೆರಳಿದ್ದು, ಅಲ್ಲಿಗೆ ಬಂದ ಆರೋಪಿಗಳಾದ ಜಯರಾಮ್, ಸಂದೀಪ್, ನವೀನ್, ಕಾರ್ತಿಕ್, ಸುಮಂತ್ ಶೆಟ್ಟಿ, ಪ್ರೀತಮ್, ಲತೇಶ್ ನೂಜಿ ಎಂಬವರು ಕೈಯಲ್ಲಿ ರಾಡ್‍ಗಳನ್ನು ಹಿಡಿದುಕೊಂಡು ಬಂದು ಅವ್ಯಾಚ್ಯ ಶಬ್ದಗಳಿಂದ ನಿಂದಿಸಿ, ರಾಡ್‍ನಿಂದ ಹಲ್ಲೆ ನಡೆಸಿದ್ದಲ್ಲದೆ, ನಾವು ತಪ್ಪಿಸಿಕೊಂಡು ಓಡಿ ಹೋಗುತ್ತಿರುವಾಗ ದ್ವಿಚಕ್ರ ವಾಹನದಲ್ಲಿ ನಮ್ಮನ್ನು ಅಟ್ಟಾಡಿಸಿಕೊಂಡು ಬಂದಿದ್ದಾರೆ. ಈ ಸಂದರ್ಭ ಆರೋಪಿ ಜಯರಾಮ ಎಂಬಾತ ನನ್ನನ್ನು ದೂಡಿ ಹಾಕಿದ್ದರಿಂದ ನನ್ನ ಎರಡೂ ಕಾಲಿನ ಮೊಣಗಂಟಿಗೆ ಹಾಗೂ ಕೈಗೆ ಗಾಯವುಂಟಾಗಿದೆ. ಅಲ್ಲದೆ, ನನ್ನ ಕಿಸೆಯಲ್ಲಿದ್ದ ಮೊಬೈಲ್ ಫೋನ್ ಜಖಂಗೊಂಡು ಎಂಟು ಸಾವಿರ ರೂ. ನಷ್ಟವುಂಟಾಗಿದೆ ಎಂದು ತಿಳಿಸಿದ್ದಾರೆ.
ಈ ಬಗ್ಗೆ ಇನ್ನೊಂದು ಪ್ರತ್ಯೇಕ ದೂರು ದಾಖಲಿಸಿರುವ ಅಬ್ದುಲ್ ಝಕಾರಿಯಾ ಎಂಬವರು ಭಾನುವಾರ ರಾತ್ರಿ ಸುಮಾರು 8ಗಂಟೆಗೆ ತಾನು ಹಾಗೂ ಸಿದ್ದೀಕ್ ಅವರೊಂದಿಗೆ ಇಕ್ಬಾಲ್ ಜಿ. ಅವರ ದಿನಸಿ ಅಂಗಡಿಯ ಬಳಿ ಇರುವಾಗ ಆರೋಪಿಗಳಾದ ಜಯರಾಮ, ಸಂದೀಪ್, ಸುಪ್ರೀತ್, ಪ್ರೀತಮ್, ಲತೇಶ್ ಹಾಗೂ 30 ಜನ ದ್ವಿಚಕ್ರ ವಾಹನ ಸವಾರರು ಅಲ್ಲಿಗೆ ಕೈಯಲ್ಲಿ ತಲವಾರು, ರಾಡ್‍ಗಳನ್ನು ಹಿಡಿದುಕೊಂಡು ಬಂದಿದ್ದು, ಸಿದ್ಧಿಕ್‌ಗೆ ಹಲ್ಲೆ ನಡೆಸಿರುತ್ತಾರೆ.

ಗಾಯಗೊಂಡವರಲ್ಲಿ ಅಯೂಬ್ ಖಾನ್ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದು, ಅಬ್ದುಲ್ ಝಕಾರಿಯಾ ಹಾಗೂ ಸಿದ್ದೀಕ್ ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಎರಡು ಪ್ರಕರಣಗಳನ್ನು ದಾಖಲಿಸಿಕೊಂಡಿರುವ ಉಪ್ಪಿನಂಗಡಿ ಪೊಲೀಸರು ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

>

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!