ಮಂಗಳೂರು : ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ

ಮಂಗಳೂರು: ಮಂಗಳೂರಿನಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಮಂಗಳೂರಿನ ಮಾರ್ಗನ್ಸ್ ರಸ್ತೆಯಲ್ಲಿ ಈ ದುರ್ಘಟ‌ನೆ ನಡೆದಿದ್ದು ಗಂಡ, ಹೆಂಡತಿ ಮತ್ತು ಇಬ್ಬರು ಮಕ್ಕಳ ಮೃತದೇಹ ಪತ್ತೆಯಾಗಿದೆ. ಮಂಗಳೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಗಂಡ ನೇಣು ಹಾಕಿಕೊಂಡು ಮೃತಪಟ್ಟಿದ್ದರೆ, ಹೆಂಡತಿ ಮತ್ತು ಮಕ್ಕಳಿಗೆ ವಿಷ ಕೊಟ್ಟಿರುವ ಶಂಕೆ ವ್ಯಕ್ತವಾಗಿದೆ.

ನಾಗೇಶ್ ಸದೇರಿಗುಪ್ಪೆ(30), ವಿಜಯಲಕ್ಷಿ(26), ಸಪ್ನ(8) ಮತ್ತು ಸಮಂತ್(4) ಮೃತರು. ಇವರುಗಳು ಮೂಲತಃ ಬಾಗಲಕೋಟೆ ಬೀಳಗಿಯ ಸುನಗ್ ಗ್ರಾಮದವರು. ನಾಗೇಶ್ ಡ್ರೈವರ್ ಆಗಿ, ವಿಜಯಲಕ್ಷ್ಮಿ ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದರು.

















































error: Content is protected !!
Scroll to Top