Wednesday, January 26, 2022
spot_img
Homeದೇಶಕಾಶ್ಮೀರ : ಗುಂಡಿನ ಚಕಮಕಿ ಇಬ್ಬರು ಉಗ್ರರ ಹತ್ಯೆ

ಕಾಶ್ಮೀರ : ಗುಂಡಿನ ಚಕಮಕಿ ಇಬ್ಬರು ಉಗ್ರರ ಹತ್ಯೆ

ಜಮ್ಮು–ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಭಾನುವಾರ ಭದ್ರತಾ ಪಡೆಗಳು ನಡೆಸಿದ ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆ. ಜಿಲ್ಲೆಯ ಹಸನ್‌ಪೋರಾ ಗ್ರಾಮದಲ್ಲಿ ಉಗ್ರರು ಅಡಗಿರುವ ಖಚಿತ ಸುಳಿವು ಅನುಸರಿಸಿ ಭದ್ರತಾ ಪಡೆಗಳು ಇಡೀ ಪ್ರದೇಶವನ್ನು ಸುತ್ತುವರಿದು ಶೋಧ ಕಾರ್ಯಾಚರಣೆ ನಡೆಸಿದವು. ಈ ಸಂದರ್ಭದಲ್ಲಿ ಯೋಧರು ಹಾಗೂ ಉಗ್ರರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರು ಸಾವನ್ನಪ್ಪಿದ್ದಾರೆ. ಹತ್ಯೆಯಾದ ಉಗ್ರರು ಯಾವ ಗುಂಪಿಗೆ ಸೇರಿದ್ದಾರೆ ಎಂಬುದನ್ನು ಪತ್ತೆ ಹಚ್ಚಲಾಗುತ್ತಿದೆ. ಗುಂಡಿನ ಚಕಮಕಿ ನಡೆದ ಸ್ಥಳದಲ್ಲಿ ಶಸ್ತ್ರಾಸ್ತ್ರಗಳು, ಮದ್ದುಗುಂಡುಗಳು ಸೇರಿದಂತೆ ಆಕ್ಷೇಪಾರ್ಹ ಪದಾರ್ಥಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ

>

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!