ರುಡ್‌ಸೆಟ್‌ ವತಿಯಿಂದ ಸಂಜೀವಿನಿ ಸ್ವ ಸಹಾಯ ಸಂಘದ ಸದಸ್ಯರಿಗೆ ವಾಹನ ತರಬೇತಿ

ಕಾರ್ಕಳ : ರುಡ್‌ಸೆಟ್‌ ಬ್ರಹ್ಮಾವರ ಸಂಸ್ಥೆ ವತಿಯಿಂದ ಎನ್.ಆರ್.ಎಲ್.ಎಂ. ಸಂಜೀವಿನಿ ಸ್ವ ಸಹಾಯ ಸಂಘದ ಮಹಿಳೆಯರಿಗಾಗಿ ಲಘು ವಾಹನ ತರಬೇತಿಗೆ ಜ. 10ರಂದು ಕಾರ್ಕಳ ತಾ.ಪಂ. ಪಂಚಾಯತ್‌ ಸಭಾಂಗಣದಲ್ಲಿ ತಾ.ಪಂ. ಕಾರ್ಯನಿರ್ವಣಾಧಿಕಾರಿ ಗುರುದತ್ ಎಂ.ಎನ್. ಚಾಲನೆ ನೀಡಿದರು.
ಬಳಿಕ ಮಾತನಾಡಿದ ಅವರು ಸರಕಾರದ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಕಾರ್ಯವಾಗಬೇಕು. ಈ ನಿಟ್ಟಿನಲ್ಲಿ ರುಡ್‌ಸೆಟ್‌ ಸಂಸ್ಥೆ ಶ್ರಮಿಸುತ್ತಿರುವುದು ಶ್ಲಾಘನೀಯವೆಂದರು.
ಕಾರ್ಯಕ್ರಮದಲ್ಲಿ ರುಡ್ಸೆಟ್ ಸಂಸ್ಥೆಯ ನಿರ್ದೇಶಕ ಪಾಪ ನಾಯಕ್ ಮಾಹಿತಿ ನೀಡಿದರು. ಜಿಲ್ಲಾ ಪಂಚಾಯತ್ ಸಹಾಯಕ ಯೋಜನಾಧಿಕಾರಿ ಜೇಮ್ಸ್ ಡಿʼಸಿಲ್ವಾ ಪ್ರಾಸ್ತಾವಿಕ ಮಾತನಾಡಿದರು. ಎನ್.ಆರ್.ಎಲ್.ಎಂ. ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕ ಪ್ರಭಾಕರ ಆಚಾರ್ ವೇದಿಕೆಯಲ್ಲಿ ಉಪಸ್ಥಿತರು.
ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕ ಗಣೇಶ್ ನಾಯ್ಕ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ರುಡ್ಸೆಟ್ ಉಪನ್ಯಾಸಕ ಸಂತೋಷ್ ವಂದಿಸಿದರು. ಸುಮಾರು 30 ಮಂದಿ ಫಲಾನುಭವಿಗಳು ಪಾಲ್ಗೊಂಡರು.





























































































error: Content is protected !!
Scroll to Top