Wednesday, January 26, 2022
spot_img
Homeರಾಜ್ಯಪಾದಯಾತ್ರೆ ಕೊರೊನಾ ಯಾತ್ರೆ ಆಗುವುದು ಬೇಡ: ಆರಗ ಜ್ಞಾನೇಂದ್ರ ಎಚ್ಚರಿಕೆ

ಪಾದಯಾತ್ರೆ ಕೊರೊನಾ ಯಾತ್ರೆ ಆಗುವುದು ಬೇಡ: ಆರಗ ಜ್ಞಾನೇಂದ್ರ ಎಚ್ಚರಿಕೆ

ಬೆಂಗಳೂರು : ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಕಾಂಗ್ರೆಸ್ ನಡೆಸುತ್ತಿರುವ ಪಾದಯಾತ್ರೆ ಕೊರೊನಾ ಯಾತ್ರೆ ಆಗುವುದು ಬೇಡ, ದಯವಿಟ್ಟು ನಿಮ್ಮ ರಾಜಕೀಯ ಉದ್ದೇಶದ ನಡಿಗೆ ಕಾರ್ಯಕ್ರಮವನ್ನು ಕೈಬಿಡಿ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಕಾಂಗ್ರೆಸ್ ನಾಯಕರಿಗೆ ಮನವಿ ಮಾಡಿದ್ದಾರೆ.

ಆರಂಭದಲ್ಲಿ, ಇವರು, ಪಾದಯಾತ್ರೆ ಆರಂಭಿಸಿದಾಗ, ನಮಗೆ ಸಾರ್ವಜನಿಕರ ಆರೋಗ್ಯದ ಮೇಲೆ ಬೀರಬಹುದಾದ ಅಡ್ಡ ಪರಿಣಾಮದ ಬಗ್ಗೆ, ಆತಂಕ ಇತ್ತು. ಆ ಕಾರಣದಿಂದ ನಾವು ಕಾರ್ಯಕ್ರಮವನ್ನು ಮುಂದಕ್ಕೆ ಹಾಕಿಕೊಳ್ಳಿ ಎಂದು ಕಾಂಗ್ರೆಸ್ ನಾಯಕರಿಗೆ ಮನವಿ ಮಾಡಿದ್ದೆವು ಎಂದಿದ್ದಾರೆ.

ಈಗ ನಮ್ಮ ಆತಂಕ ನಿಜವಾಗುತ್ತಿದೆ, ಕೊರೊನಾ ಬಗ್ಗೆ ಕಾಂಗ್ರೆಸ್ ನಾಯಕರು ಅಪ ಪ್ರಚಾರ ಮಾಡುತ್ತಿರುವುದಲ್ಲದೆ ವಿತಂಡ ವಾದ ಮಂಡಿಸುತ್ತಿದ್ದಾರೆ. ಪಾದಯಾತ್ರೆಯಲ್ಲಿ ತೊಡಗಿಕೊಂಡಿದ್ದ ಕೆಲವು ನಾಯಕರಿಗೆ ಸೋಂಕು ತಗುಲಿದ್ದು, ಆಸ್ಪತ್ರೆ ಸೇರಿದ್ದಾರೆ ಎಂದು ಆರಗ ಹೇಳಿದ್ದಾರೆ.

ಆ ಕಾರಣದಿಂದ ಮತ್ತೊಮ್ಮೆ ಕಾಂಗ್ರೆಸ್ ನಾಯಕರಿಗೆ, ಮನವಿ ಮಾಡುತ್ತೇನೆ, ನಿಮ್ಮ ನಿರ್ಧಾರವನ್ನು ಸಾರ್ವಜನಿಕರ ಆರೋಗ್ಯ ರಕ್ಷಣೆಯ ದೃಷ್ಟಿಯಿಂದ, ಪಾದಯಾತ್ರೆ ಕಾರ್ಯಕ್ರಮವನ್ನು ಕೈಬಿಡಿ. ಕೊರೊನಾ, ಅಪಾಯಕಾರಿ ರೀತಿಯಲ್ಲಿ ಹರಡುತ್ತಿದೆ, ಸಮಾಜದ ಎಲ್ಲಾ ಜನರೂ, ವಿಶೇಷವಾಗಿ, ಎಲ್ಲಾ ಕ್ಷೇತ್ರದ ಶ್ರಮಿಕ ವರ್ಗದವರೂ ಆತಂಕಗೊಂಡಿದ್ದಾರೆ.

ಈಗಾಗಲೇ ನೀವು ಜನತೆಯ ಆಕ್ರೋಶಕ್ಕೆ ಗುರಿಯಾಗಿದ್ದು ಅವರ ಕ್ಷಮೆ ಕೇಳಬೇಕಾಗಿದೆ ಎಂದು ಸಚಿವರು, ತಿಳಿಸಿದ್ದಾರೆ. ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಕಾಂಗ್ರೆಸ್ ಪಾದಯಾತ್ರೆ ನಡೆಸುತ್ತಿದೆ. ಪಾದಯಾತ್ರೆಗೆ ಬುಧವಾರ ನಾಲ್ಕನೇ ದಿನ. ಒಂದು ಕಡೆಯಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ರಾಜ್ಯಾದ್ಯಂತ ತೀವ್ರ ಪ್ರಮಾಣದಲ್ಲಿ ಏರಿಕೆ ಆಗುತ್ತಿದೆ. ಮತ್ತೊಂದು ಕಡೆಯಲ್ಲಿ ಕಾಂಗ್ರೆಸ್ ಪಾದಯಾತ್ರೆಯಲ್ಲಿ ಕೋವಿಡ್ ನಿಯಮಾವಳಿಗಳ ಪಾಲನೆಯೂ ಆಗುತ್ತಿಲ್ಲ. ಈ ನಿಟ್ಟಿನಲ್ಲಿ ಪಾದಯಾತ್ರೆ ರಾಜಕೀಯ ಆರೋಪ ಪ್ರತ್ಯಾರೋಪಕ್ಕೆ ಕಾರಣವಾಗುತ್ತಿದೆ.

>

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!