Wednesday, January 26, 2022
spot_img
HomeUncategorizedಜಮ್ಮು-ಕಾಶ್ಮೀರ : ಕುಲ್ಗಾಂನಲ್ಲಿ ಎನ್ಕೌಂಟರ್: ಓರ್ವ ಉಗ್ರ ಹತ, ಓರ್ವ ಪೊಲೀಸ್ ಹುತಾತ್ಮ

ಜಮ್ಮು-ಕಾಶ್ಮೀರ : ಕುಲ್ಗಾಂನಲ್ಲಿ ಎನ್ಕೌಂಟರ್: ಓರ್ವ ಉಗ್ರ ಹತ, ಓರ್ವ ಪೊಲೀಸ್ ಹುತಾತ್ಮ

ಕುಲ್ಗಾಮ್‌ ಜಿಲ್ಲೆಯಲ್ಲಿ ಜ.12ರಂದು ಆರಂಭಿಸಲಾಗಿದ್ದ ಎನ್‌ಕೌಂಟರ್‌ನಲ್ಲಿ ಜೈಷ್‌-ಎ-ಮೊಹಮ್ಮದ್‌ ಉಗ್ರ ಸಂಘಟನೆಯ ಓರ್ವ ಭಯೋತ್ಪಾದನನ್ನು ಹೊಡೆದುರುಳಿಸುವಲ್ಲಿ ಸೇನಾ ಹಾಗೂ ಕಾಶ್ಮೀರದ ಪೊಲೀಸರು ಯಶಸ್ವಿಯಾಗಿದ್ದಾರೆ. ಉಗ್ರರೊಂದಿಗಿನ ಜಂಟಿ ಹೋರಾಟದ ಆರಂಭದಲ್ಲೇ ದುರಾದುಷ್ಟವಶಾತ್‌ ಕಾಶ್ಮೀರದ ಪೊಲೀಸ್‌ ಸಿಬ್ಬಂದಿ ರೋಹಿತ್‌ ಕುಮಾರ್‌ ಚಿಬ್‌ ಎಂಬುವವರು ಹುತಾತ್ಮರಾಗಿದ್ದಾರೆ. ದಾಳಿ ವೇಳೆ 34 ಆರ್‌ಆರ್‌ನ ಮೂವರು ಸೈನಿಕರು ಹಾಗೂ ಇಬ್ಬರು ನಾಗರಿಕರು ಗಾಯಗೊಂಡಿದ್ದಾರೆ. ದಕ್ಷಿಣ ಕಾಶ್ಮೀರದ ಕುಲ್ಗಾಮ್‌ ಜಿಲ್ಲೆಯ ಪರಿವಾನ್‌ ಗ್ರಾಮದಲ್ಲಿ ಎನ್‌ಕೌಂಟರ್‌ ನಡೆದಿದ್ದು, ಎಲ್ಲಾ ಗಾಯಗಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಎಲ್ಲರ ಆರೋಗ್ಯ ಸ್ಥಿರವಾಗಿದೆ ಎಂದು ತಿಳಿದುಬಂದಿದೆ. ಪ್ರಸ್ತುತ ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರೆದಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ

>

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!