Wednesday, January 26, 2022
spot_img
Homeರಾಜ್ಯನಗರದಲ್ಲಿ ಕೃಷಿ ಭೂಮಿ ಪರಿವರ್ತನೆಗಿದ್ದ ತೊಡಕು ನಿವಾರಣೆಉಡುಪಿ, ದ.ಕ., ಉತ್ತರ ಕನ್ನಡ ಜಿಲ್ಲೆಗೆ ಪ್ರಾಧಿಕಾರದ ಕಿರಿಕಿರಿಯಿಂದ...

ನಗರದಲ್ಲಿ ಕೃಷಿ ಭೂಮಿ ಪರಿವರ್ತನೆಗಿದ್ದ ತೊಡಕು ನಿವಾರಣೆ
ಉಡುಪಿ, ದ.ಕ., ಉತ್ತರ ಕನ್ನಡ ಜಿಲ್ಲೆಗೆ ಪ್ರಾಧಿಕಾರದ ಕಿರಿಕಿರಿಯಿಂದ ರಿಲೀಫ್‌

ಕಾರ್ಕಳ : ಸ್ಥಳೀಯ ಯೋಜನಾ ಪ್ರದೇಶ ಘೋಷಣೆಯಾದ ಹಲವಾರು ಪ್ರದೇಶಗಳಲ್ಲಿ ಮಾಸ್ಟರ್‌ ಪ್ಲಾನ್‌ ತಯಾರಿಸದೇ ನಗರ ಯೋಜನಾ ಪ್ರಾಧಿಕಾರದಿಂದ ಉಂಟಾಗುತ್ತಿದ್ದ ಅನಗತ್ಯ ವಿಳಂಬಕ್ಕೆ ಇದೀಗ ನಗರಾಭಿವೃದ್ಧಿ ಇಲಾಖೆ ರಿಲೀಫ್‌ ನೀಡಿದೆ. ಉಡುಪಿ, ದ.ಕ., ಉತ್ತರ ಕನ್ನಡ ಜಿಲ್ಲೆಗಳಿಗೆ ಅನ್ವಯವಾಗುವಂತೆ 3 ತಿಂಗಳ ಅವಧಿಯವರೆಗೆ ನಗರ ಸ್ಥಳೀಯ ಸಂಸ್ಥೆಯಿಂದ ಭೂಪರಿವರ್ತನೆಗೆ ನಿರಾಕ್ಷೇಪಣಾ ಪಡೆಯಲು ಸಾರ್ವಜನಿಕರಿಗೆ ಅವಕಾಶ ಮಾಡಿಕೊಟ್ಟಿದೆ.

3 ತಿಂಗಳಲ್ಲಿ ಮಾಸ್ಟರ್‌ ಪ್ಲಾನ್‌ ತಯಾರಿಸುವಂತೆ ಪ್ರಾಧಿಕಾರಕ್ಕೆ ಸೂಚನೆ
3 ತಿಂಗಳ ಅವಧಿಯೊಳಗೆ ಸಂಬಂಧಿಸಿದ ಯೋಜನಾ ಪ್ರಾಧಿಕಾರಗಳು ಮಹಾಯೋಜನೆ (ಮಾಸ್ಟರ್‌ ಪ್ಲಾನ್) ಯನ್ನು ತಯಾರಿಸುವ ಕೆಲಸವನ್ನು ಪೂರ್ಣಗೊಳಿಸಿ ಸರ್ಕಾರದ ಅನುಮೋದನೆಗೆ ಸಲ್ಲಿಸುವಂತೆಯೂ ನಗರಾಭಿವೃದ್ಧಿ ಇಲಾಖೆ ಸೂಚಿಸಿದೆ. ತಪ್ಪಿದಲ್ಲಿ ನಿಯಮಾನುಸಾರ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ನಗರಾಭಿವೃದ್ಧಿ ಇಲಾಖೆಯ ಅಧೀನ ಕಾರ್ಯದರ್ಶಿ ಲತಾ ಕೆ.‌ ಜ. 13ರಂದು ಹೊರಡಿಸಿರುವ ಆದೇಶದಲ್ಲಿ ತಿಳಿಸಿರುತ್ತಾರೆ.

ಸಚಿವ ಸುನಿಲ್‌ ಕುಮಾರ್‌ ಪ್ರಯತ್ನ
ನಗರ ಯೋಜನಾ ಪ್ರಾಧಿಕಾರದ ಕಾನೂನಿನ ತೊಡಕಿನಿಂದಾಗಿ ಕೃಷಿ ಭೂಮಿಯನ್ನು ವಸತಿ ಅಥವಾ ವಾಣಿಜ್ಯ ಉದ್ದೇಶಕ್ಕೆ ಪರಿವರ್ತಿಸಲು ನಿರಾಕ್ಷೇಪಣಾ ಪಡೆಯಲು ಸಾ‍ಧ್ಯವಾಗುತ್ತಿರಲಿಲ್ಲ. ಕಳೆದ ಒಂದೂವರೆ ವರ್ಷಗಳಿಂದ ನಗರಗಳಲ್ಲಿ ಭೂಪರಿವರ್ತನೆಗಾಗಿ ಜನತೆ ಸಾಕಷ್ಟು ತೊಂದರೆ ಅನುಭವಿಸುತ್ತಿದ್ದರು. ಈ ಕುರಿತು ಹಲವಾರು ಮಂದಿ ಸಚಿವ ಸುನಿಲ್‌ ಕುಮಾರ್‌ ಅವರಿಗೆ ಮನವಿ ಮಾಡಿ, ತಮ್ಮ ಅಳಲು ತೋಡಿಕೊಂಡಿದ್ದರು. ಸಮಸ್ಯೆ ಬಗೆಹರಿಸುವಲ್ಲಿ ಸತತ ಪ್ರಯತ್ನಿಸಿರುವ ಸುನಿಲ್‌ ಕುಮಾರ್‌ ಅವರು ಸಿಎಂ ಬೊಮ್ಮಾಯಿ ಗಮನ ಸೆಳೆದಿದ್ದು, ಉಡುಪಿ, ದ.ಕ., ಉತ್ತರ ಕನ್ನಡ ಜಿಲ್ಲೆಗಳಲ್ಲಿದ್ದ ಕಾನೂನಿನ ತೊಡಕನ್ನು ನಿವಾರಿಸಿದ್ದಾರೆ.

>

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!