Wednesday, January 26, 2022
spot_img
HomeUncategorizedಭಾರತ : ಹೆಚ್ಚಿದ ಕೊರೋನಾ ಅಬ್ಬರ: ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ಮೋದಿ ಇಂದು ಸಭೆ

ಭಾರತ : ಹೆಚ್ಚಿದ ಕೊರೋನಾ ಅಬ್ಬರ: ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ಮೋದಿ ಇಂದು ಸಭೆ

ಭಾರತದಲ್ಲಿ ಕೊರೋನಾ ಹಾಗೂ ಓಮಿಕ್ರಾನ್ ಸೋಂಕು ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದ್ದು, ಈ ಹಿನ್ನಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಜ.13ರಂದು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸಲಿದ್ದಾರೆಂದು ತಿಳಿದುಬಂದಿದೆ. ರಾಜ್ಯದಲ್ಲಿ ಫೆಬ್ರವರಿ ತಿಂಗಳಿನಲ್ಲಿ ಗರಿಷ್ಠ ಪ್ರಮಾಣಕ್ಕೆ ಸೋಂಕು ತಲುಪಲಿದ್ದು, ಕೊರೋನಾ 3ನೇ ಅಲೆ ತೀವ್ರ ಸ್ವರೂಪ ಪಡೆದುಕೊಳ್ಳಲಿದೆ ಎಂದು ತಜ್ಞರು ಎಚ್ಚರಿಕೆ ನೀಡಿದ್ದಾರೆ. ಈ ಕುರಿತಂತೆ ಪ್ರಧಾನಿ ಮೋದಿಯವರು ನಡೆಸುತ್ತಿರುವ ಈ ಸಭೆ ಮಹತ್ವವನ್ನು ಪಡೆದುಕೊಂಡಿದೆ. ರಾಜ್ಯದಲ್ಲಿ ಈಗಾಗಲೇ ವೀಕೆಂಡ್, ನೈಟ್ ಕರ್ಫ್ಯೂ ಸೇರಿದಂತೆ ಇತರೆ ಕಠಿಣ ನಿಯಮ ಜಾರಿಗೆ ತಂದರೂ ಸೋಂಕು ನಿಯಂತ್ರಣಕ್ಕೆ ಬರುತ್ತಿಲ್ಲ. ಈ ಹಿನ್ನೆಲೆಯಲ್ಲಿ ಲಾಕ್‌ಡೌನ್ ಮಾತುಗಳು ಕೇಳಿಬರುತ್ತಿವೆ. ಇದರ ಮಧ್ಯೆ ಮುಖ್ಯಮಂತ್ರಿಗಳ ಜತೆ ಮೋದಿ ಸಭೆ ಮಾಡುತ್ತಿದ್ದು, ಲಾಕ್‌ಡೌನ್ ಹಾಗೂ ಕಠಿಣ ನಿಯಮಗಳ ಚರ್ಚೆಯಾಗಲಿದೆ.

>

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!