Wednesday, January 26, 2022
spot_img
Homeಸುದ್ದಿನಿರಂತರ ಭಜನೆಯಿಂದ ಕ್ಷೇತ್ರದ ಸಾನಿಧ್ಯ ವೃದ್ಧಿ - ಶ್ಯಾಮಲಾ ಎಸ್. ಕುಂದರ್

ನಿರಂತರ ಭಜನೆಯಿಂದ ಕ್ಷೇತ್ರದ ಸಾನಿಧ್ಯ ವೃದ್ಧಿ – ಶ್ಯಾಮಲಾ ಎಸ್. ಕುಂದರ್

ಕಾರ್ಕಳ : ಪುಣ್ಯ ಕ್ಷೇತ್ರದಲ್ಲಿ ನಿರಂತರವಾಗಿ ಭಜನೆ ನಡೆಸುವುದರಿಂದ ಕ್ಷೇತ್ರದ ಸಾನಿಧ್ಯ ವೃದ್ಧಿಸುವುದು. ಭಕ್ತಿಯಿಂದ ಭಜನೆ ಮಾಡಿದಲ್ಲಿ ನೆಮ್ಮದಿ ಕಾಣಬಹುದಾಗಿದೆ ಎಂದು ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಶಾಮಲಾ ಎಸ್. ಕುಂದರ್ ಅಭಿಪ್ರಾಯಪಟ್ಟರು.

ಅವರು ಜ. 13ರಂದು ಹಿರಿಯಂಗಡಿ ಶ್ರೀದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ ಪ್ರಯುಕ್ತ ಹಮ್ಮಿಕೊಂಡ ಭಜನಾ ಮಾಸ ಕಾರ್ಯಕ್ರಮದಲ್ಲಿ ದೀಪ ಪ್ರಜ್ವಲಿಸಿ‌ ಮಾತನಾಡಿದರು. ಕಾರ್ಕಳ ನನ್ನ ಹುಟ್ಟೂರು. ಬ್ರಹ್ಮಕಲಶೋತ್ಸವದ ಹೊಸ್ತಿಲಲ್ಲಿರುವ ದೇವಸ್ಥಾನದ ಕಾರ್ಯಕ್ರಮದಲ್ಲಿ ಭಾಗವಹಿಸುವ ಅವಕಾಶ ಸಿಕ್ಕಿದ್ದು ನನ್ನ ಭಾಗ್ಯವೆಂದು ಅವರು ಹೇಳಿದರು.

ಚೇತನಾ ಶಶಿಕಾಂತ್ ಕರಿಂಕ, ಶಾರದಾ ಮಾದೋಜಿ ಮುಂಡ್ಕೂರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ದೇವಳದ ಆಡಳಿತ ಮೊಕ್ತೇಸರ ಗಿರೀಶ್ ರಾವ್ ಅಧ್ಯಕ್ಷತೆ ವಹಿಸಿದ್ದರು. ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಶುಭದ ರಾವ್ ಸ್ವಾಗತಿಸಿ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಪ್ರಕಾಶ್ ಜಾದವ್ ವಂದಿಸಿದರು.‌ ಪದ್ಮಾವತಿ ಮಹಿಳಾ ಭಜನಾ ಮಂಡಲಿ ಸದಸ್ಯರು ‌ಭಜನಾ ಕಾರ್ಯಕ್ರಮ ನಡೆಸಿಕೊಟ್ಟರು.

>

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!