Wednesday, May 18, 2022
spot_img
Homeಸುದ್ದಿವೈದ್ಯರ ನಡೆ ಹಳ್ಳಿ ಕಡೆ: ಸಿಎಂ ಬೊಮ್ಮಾಯಿ

ವೈದ್ಯರ ನಡೆ ಹಳ್ಳಿ ಕಡೆ: ಸಿಎಂ ಬೊಮ್ಮಾಯಿ

ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೇ ಕೊರೊನಾ ಹಾವಳಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸೋಂಕಿನ ಸರಪಳಿಯನ್ನು ತುಂಡರಿಸಲು ಸರಕಾರ ನಿರ್ಧರಿಸಿದ್ದು, ಇದಕ್ಕಾಗಿ ವೈದ್ಯರ ನಡೆ ಹಳ್ಳಿ ಕಡೆ ಕಾರ್ಯಕ್ರಮವನ್ನು ಮತ್ತೆ ಆರಂಭಿಸುವುದಾಗಿ ಘೋಷಿಸಿದೆ.
ಮಂಗಳವಾರ ವೀಡಿಯೋ ಸಂವಾದ ನಡೆಸಿ ಜಿಲ್ಲಾಧಿಕಾರಿಗಳು, ಜಿ.ಪಂ. ಸಿಇಒಗಳು ಮತ್ತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಜತೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಆಯಾ ಜಿಲ್ಲೆಗಳ ಪರಿಸ್ಥಿತಿ ಬಗ್ಗೆ ಮಾಹಿತಿ ಪಡೆದಿದ್ದಾರೆ. ಈ ವೇಳೆ ಕೂಡಲೇ ವೈದ್ಯರ ನಡೆ ಹಳ್ಳಿ ಕಡೆ ಕಾರ್ಯಕ್ರಮ ಪ್ರಾರಂಭಿಸಬೇಕು ಎಂಬ ನಿರ್ಧಾರವನ್ನು ಕೈಗೊಂಡಿದ್ದು ವೈದ್ಯರು ಮತ್ತು ಎಎನ್‌ಎಂಗಳು ಮನೆ ಮನೆಗೆ ಭೇಟಿ ನೀಡಬೇಕು, ಪ್ರತೀ ಗ್ರಾಮಕ್ಕೆ ತೆರಳಿ ಜನರನ್ನು ಪರೀಕ್ಷೆಗೆ ಒಳಪಡಿಸಿ ಚಿಕಿತ್ಸೆ ನೀಡಬೇಕು. ಇದಕ್ಕಾಗಿ ವಿಶೇಷ ಮಾರ್ಗಸೂಚಿಯನ್ನು ರೂಪಿಸುತ್ತೇವೆ ಎಂದಿದ್ದಾರೆ.

ಡಿ.ಸಿ.ಗಳೇ ಹೊಣೆ
ಲಸಿಕಾಕರಣ ಕಡಿಮೆಯಾದರೆ ಅಥವಾ ನಿರ್ಲಕ್ಷ್ಯ ಕಂಡುಬಂದರೆ ಡಿ.ಸಿ ಗಳನ್ನೇ ಹೊಣೆಗಾರರನ್ನಾಗಿ ಮಾಡುವುದಾಗಿ ಮಂಗಳವಾರದ ಸಭೆಯಲ್ಲಿ ಸಿಎಂ ಆದೇಶಿಸಿದ್ದಾರೆ

ಕರ್ಫ್ಯೂ ಬಗ್ಗೆ ಶುಕ್ರವಾರ ನಿರ್ಧಾರ
ರಾಜ್ಯದಲ್ಲಿ ವಾರಾಂತ್ಯ ಕರ್ಫ್ಯೂ ಮತ್ತು ರಾತ್ರಿ ಕರ್ಫ್ಯೂ ಮುಂದುವರಿಕೆಗೆ ವಿರೋಧ ವ್ಯಕ್ತ ವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಸಡಿಲಿಕೆ ಬಗ್ಗೆ ಗಂಭೀರ ಚಿಂತನೆ ನಡೆಸುತ್ತಿದೆ. ಈ ಬಗ್ಗೆ ಶುಕ್ರವಾರ ನಡೆಯುವ ಸಭೆಯಲ್ಲಿ ಅಂತಿಮ ನಿರ್ಧಾರ ಕೈಗೊಳ್ಳಲು ತೀರ್ಮಾನಿಸಿದೆ. ಪ್ರಕರಣಗಳ ಸಂಖ್ಯೆ ಕಡಿಮೆ ಇರುವ ಜಿಲ್ಲೆಗಳಲ್ಲಿ ನಿರ್ಬಂಧಗಳನ್ನು ಹಿಂಪಡೆಯುವ ಸಾಧ್ಯತೆಗಳಿದ್ದು ಬೆಂಗಳೂರು ಮತ್ತಿತರ ಕೆಲವೆಡೆ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದ್ದರೂ ಮರಣ ಪ್ರಮಾಣ ಮತ್ತು ಜನರ ಆರೋಗ್ಯದ ದೃಷ್ಟಿಯಿಂದ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!