Saturday, May 21, 2022
spot_img
Homeಸ್ಥಳೀಯ ಸುದ್ದಿಟಿಬಿ ಸೋಲಿಸಿ - ಕರ್ನಾಟಕ ಗೆಲ್ಲಿಸಿ : ಕಾಲೇಜು ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಸ್ಪರ್ಧೆ

ಟಿಬಿ ಸೋಲಿಸಿ – ಕರ್ನಾಟಕ ಗೆಲ್ಲಿಸಿ : ಕಾಲೇಜು ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಸ್ಪರ್ಧೆ

ಕಾರ್ಕಳ : 2025ರ ವೇಳೆ ಕ್ಷಯಮುಕ್ತ ಭಾರತ ಮಾಡುವ ನಿಟ್ಟಿನಲ್ಲಿ ಕೇಂದ್ರ ಹಾಗೂ ರಾಜ್ಯ ಸರಕಾರದ ಕಾರ್ಯತಂತ್ರದ ಯೋಜನೆಯಂತೆ ರಾಜ್ಯ ಕ್ಷಯರೋಗ ನಿರ್ಮೂಲನ ಕೇಂದ್ರದ ಮಾರ್ಗಸೂಚಿಯಂತೆ “ಟಿಬಿ ಸೋಲಿಸಿ, ಕರ್ನಾಟಕ ಗೆಲ್ಲಿಸಿ” ಅಭಿಯಾನದಂಗವಾಗಿ ಪದವಿ ಹಾಗೂ ತಾಂತ್ರಿಕ ಕಾಲೇಜು ವಿದ್ಯಾರ್ಥಿಗಳಿಗೆ ಜ. 24ರಂದು ಕಾರ್ಕಳ ಜ್ಞಾನಸುಧಾ ಕಾಲೇಜಿನಲ್ಲಿ ರಸಪ್ರಶ್ನೆ ನಡೆಯಲಿದೆ.

ಕ್ಷಯರೋಗ ನಿರ್ಮೂಲನ ಘಟಕ ಕಾರ್ಕಳ ಇದರ ವತಿಯಿಂದ ಭಾರತೀಯ ರೆಡ್ ಕ್ರಾಸ್ ಸೊಸೈಟಿ ಕಾರ್ಕಳ ಪ್ರಾಯೋಜಕತ್ವ, ಅಜೆಕಾರು ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ ಗಣಿತನಗರ ಸಹಕಾರದೊಂದಿಗೆ ರಸಪ್ರಶ್ನೆ ನಡೆಯಲಿದ್ದು, ನ್ಯೂಸ್‌ ಕಾರ್ಕಳ ಮೀಡಿಯಾ ಪಾರ್ಟ್ ನರ್‌ ಆಗಿ ಸಹಕಾರ ನೀಡಲಿದೆ.

ಭಾರತೀಯ ರೆಡ್‌ ಕ್ರಾಸ್‌ ಸೊಸೈಟಿ ಕಾರ್ಕಳ ಶಾಖೆ ಅಧ್ಯಕ್ಷ ಡಾ. ಕೆ.ಆರ್.‌ ಜೋಶಿ ರಸಪ್ರಶ್ನೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಿರುವರು. ಜ್ಞಾನಸುಧಾ ಸಮೂಹ ಸಂಸ್ಥೆಗಳ ಅಧ್ಯಕ್ಷ ಡಾ. ಸುಧಾಕರ್‌ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದು, ಜಿಲ್ಲಾ ಕ್ಷಯರೋಗ ನಿರ್ಮೂಲನಾ ಅಧಿಕಾರಿ ಡಾ. ಚಿದಾನಂದ ಸಂಜು ಎಸ್‌. ವಿ., ತಾಲೂಕು ಆರೋಗ್ಯಾಧಿಕಾರಿ ಡಾ. ಕೃಷ್ಣಾನಂದ ಶೆಟ್ಟಿ ಉಪಸ್ಥಿತರಿವರು.

ರಸಪ್ರಶ್ನೆ
ಜ. 24ರ ಸೋಮವಾರ ಅಪರಾಹ್ನ 2:30ರಿಂದ ರಸಪ್ರಶ್ನೆ ಸ್ಪರ್ಧೆ ನಡೆಯಲಿದೆ. ಒಂದು ಕಾಲೇಜಿನಿಂದ ಇಬ್ಬರು ವಿದ್ಯಾರ್ಥಿಗಳು ಭಾಗವಹಿಸಬಹುದಾಗಿದೆ. ಕಾರ್ಕಳ, ಹೆಬ್ರಿ ಉಭಯ ತಾಲೂಕಿನ ಕಾಲೇಜು ವಿದ್ಯಾರ್ಥಿಗಳಿಗೆ ಅವಕಾಶವಿದ್ದು, ಜ. 22ರಂದು ಹೆಸರು ನೋಂದಾಯಿಸಲು ಕೊನೆಯ ದಿನಾಂಕವಾಗಿದೆ. ವಿಜೇತರಿಗೆ ನಗದು ಬಹುಮಾನ ನೀಡಲಾಗುವುದು. ನ್ಯೂಸ್‌ ಕಾರ್ಕಳದಲ್ಲಿ ಕ್ವಿಜ್‌ ಕಾರ್ಯಕ್ರಮ ನೇರ ಪ್ರಸಾರಗೊಳ್ಳಲಿದೆ ಎಂದು ಹಿರಿಯ ಕ್ಷಯರೋಗ ಚಿಕಿತ್ಸಾ ಮೇಲ್ವಿಚಾರಕ ಶಿವಕುಮಾರ್‌ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ – 9743785410 ಸಂಪರ್ಕಿಸಬಹುದಾಗಿದೆ.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!