Wednesday, May 18, 2022
spot_img
Homeದೇಶಉತ್ತರ ಪ್ರದೇಶ : ಸಮಾಜವಾದಿ ಪಕ್ಷದ ವರಿಷ್ಠ ಮುಲಾಯಂ ಸಿಂಗ್ ಯಾದವ್ ಸೊಸೆ ಅಪರ್ಣಾ ಯಾದವ್...

ಉತ್ತರ ಪ್ರದೇಶ : ಸಮಾಜವಾದಿ ಪಕ್ಷದ ವರಿಷ್ಠ ಮುಲಾಯಂ ಸಿಂಗ್ ಯಾದವ್ ಸೊಸೆ ಅಪರ್ಣಾ ಯಾದವ್ ಬಿಜೆಪಿಗೆ ಸೇರ್ಪಡೆ

ಉತ್ತರ ಪ್ರದೇಶ : ಸಮಾಜವಾದಿ ಪಕ್ಷದ ವರಿಷ್ಠ ಮುಲಾಯಂ ಸಿಂಗ್ ಯಾದವ್ ಅವರ ಸೊಸೆ ಅಪರ್ಣಾ ಯಾದವ್ ಅವರು ಬುಧವಾರ ಬಿಜೆಪಿಗೆ ಸೇರ್ಪಡೆಗೊಂಡಿದ್ದು, ಉತ್ತರಪ್ರದೇಶದ ಉಪ ಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಸ್ವತಂತ್ರ ದೇವ್ ಸಿಂಗ್ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡರು. ಉತ್ತರಪ್ರದೇಶ ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ದಿನಗಳು ಬಾಕಿ ಇರುವಾಗಲೇ ಅಪರ್ಣಾ ಯಾದವ್ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡಿರುವುದು ಸಮಾಜವಾದಿ ಪಕ್ಷಕ್ಕೆ ತೀವ್ರ ಹಿನ್ನಡೆಯುಂಟಾಗುವಂತೆ ಮಾಡಿದೆ. ಪ್ರಧಾನಿ ಮೋದಿಯವರ ಸ್ವಚ್ಛ ಭಾರತ್ ಮಿಷನ್, ಮಹಿಳೆಯರ ಕಲ್ಯಾಣ, ಉದ್ಯೋಗ ಸೇರಿದಂತೆ ಬಿಜೆಪಿಯ ಇತರೆ ಕಾರ್ಯಗಳು ಮತ್ತು ಯೋಜನೆಗಳಿಂದ ನಾನು ಪ್ರಭಾವಿತಳಾಗಿದ್ದೇನೆ ಮತ್ತು ಪಕ್ಷಕ್ಕಾಗಿ ಪೂರ್ಣ ಸಾಮರ್ಥ್ಯದೊಂದಿಗೆ ಕೆಲಸ ಮಾಡುತ್ತೇನೆಂದು ಅಪರ್ಣಾ ಯಾದವ್‌ ತಿಳಿಸಿದರು.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!