ಬೆಂಗಳೂರು: ಕೊರೊನಾ ಪ್ರಕರಣಗಳು ಹೆಚ್ಚಾಗಿ ಕಂಡುಬರುತ್ತಿರುವುದರಿಂದ ಬೆಂಗಳೂರಿನಲ್ಲಿ ಜನವರಿ 29 ರವರೆಗೆ ಶಾಲಾ- ಕಾಲೇಜ್ ಇರುವುದಿಲ್ಲ ಎಂದು ಶಿಕ್ಷಣ ಸಚಿವ ಬಿ. ಸಿ. ನಾಗೇಶ್ ತಿಳಿಸಿದ್ದಾರೆ.
ಮುಖ್ಯಮಂತ್ರಿ ನೇತೃತ್ವದ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರು ಹೊರತುಪಡಿಸಿದರೆ ಉಳಿದೆಲ್ಲಾ ಕಡೆಗಳಲ್ಲಿ ಶಾಲೆಗಳು ಇರುತ್ತದೆ. ಬೆಂಗಳೂರಿನಲ್ಲಿ ಶಾಲೆ ಓಪನ್ ಬಗ್ಗೆ ಜನವರಿ 29 ರಂದು ನಡೆಯಲಿರುವ ಸಭೆಯಲ್ಲಿ ತೀರ್ಮಾನ ಮಾಡಲಾಗುವುದು ಎಂದು ತಿಳಿಸಿದರು.
ಮಕ್ಕಳಲ್ಲಿ ಸೋಂಕಿನ ಪ್ರಮಾಣ ಹೆಚ್ಚಾದರೆ ಮಾತ್ರ ಶಾಲೆ ಬಂದ್ ಮಾಡಲಾಗುವುದು. ಕಡಿಮೆ ಮಕ್ಕಳಿಗೆ ಕೊರೊನಾ ಸೋಂಕು ದೃಢಪಟ್ಟರೆ ಮೂರು ದಿನ ಶಾಲೆ ಬಂದ್ ಮಾಡಲಾಗುವುದು, 25 ರಿಂದ 30 ಮಕ್ಕಳಿಗೆ ಸೋಂಕು ತಗುಲಿದ ಸಂದರ್ಭದಲ್ಲಿ ಏಳು ದಿನ ಶಾಲೆಯನ್ನು ಬಂದ್ ಮಾಡಲಾಗುತ್ತದೆ. ಶಾಲೆ ಓಪನ್ ಬಗ್ಗೆ ತೀರ್ಮಾನ ಕೈಗೊಳ್ಳುವ ಅಧಿಕಾರವನ್ನು ಸ್ಥಳೀಯ ಅಧಿಕಾರಿಗಳಿಗೆ ನೀಡಲಾಗಿದೆ ಎಂದರು.
ಈವರೆಗೆ 5 ಲಕ್ಷಕ್ಕಿಂತ ಹೆಚ್ಚಿನ ಮಕ್ಕಳಿಗೆ ಕೋವಿಡ್ ಪರೀಕ್ಷೆ ಮಾಡಲಾಗಿದ್ದು, ಈ ಪೈಕಿ ಶೇಕಡಾ 5 ರಷ್ಟು ಮಕ್ಕಳಿಗೆ ಮಾತ್ರ ಸೋಂಕು ಪತ್ತೆಯಾಗಿದೆ.
ರಾಜ್ಯ ಸರ್ಕಾರದಿಂದ ಶಾಲೆಗಳಿಗೆ ಹೊಸ ನಿಯಮ ಪ್ರಕಟ
Recent Comments
ಕಗ್ಗದ ಸಂದೇಶ
on