ಈ ವರ್ಷ ‘ಕೊರೊನಾ ಪಾಸ್’ ಇಲ್ಲಾ ಎಲ್ಲಾ ವಿದ್ಯಾರ್ಥಿಗಳು‌ ಎಸ್.ಎಸ್.ಎಲ್.ಸಿ. ಪರೀಕ್ಷೆಗೆ ಹಾಜರಾಗುತ್ತಾರೆ : ಸಚಿವ ಬಿ.ಸಿ.ನಾಗೇಶ್

ಬೆಂಗಳೂರು : ಕಳೆದ ವರ್ಷದಂತೆ ಈ ವರ್ಷ ಕೊರೊನಾ ಪಾಸ್ ಇರುವುದಿಲ್ಲ. ಎಲ್ಲಾ ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಹಾಜರಾಗುತ್ತಾರೆ ಕಳೆದ ವರ್ಷ ಕೋವಿಡ್ ಸಾಂಕ್ರಾಮಿಕ ರೋಗದಿಂದ ವಿದ್ಯಾರ್ಥಿಗಳು ಪರೀಕ್ಷೆಯಿಲ್ಲದೆ ಉತ್ತೀರ್ಣರಾದ ಬಗ್ಗೆ ಉಲ್ಲೇಖಿಸಿ ಪ್ರತಿಕ್ರಿಯೆ ನೀಡಿರುವ ಸಚಿವರು 2020-21 ಶೈಕ್ಷಣಿಕ ವರ್ಷದಲ್ಲಿ ವಿದ್ಯಾರ್ಥಿಗಳು ಮತ್ತು ಶಾಲೆಗಳು ತೀವ್ರವಾದ ಕೋವಿಡ್-ಸಂಬಂಧಿತ ಸಮಸ್ಯೆಗಳನ್ನು ಎದುರಿಸುತ್ತಿರುವ ಕಾರಣ ಕಳೆದ ವರ್ಷ ಸಮಸ್ಯೆ ವಿಭಿನ್ನವಾಗಿತ್ತು. ಕಳೆದ ವರ್ಷ ನೀಡಿದ್ದ ಸೌಲಭ್ಯವನನ್ನೇ ಈ ಬಾರಿಯೂ ವಿಸ್ತರಿಸಿದರೆ ವಿದ್ಯಾರ್ಥಿಗಳು ಓದುವುದನ್ನೇ ಮರೆತು ಬಿಡುತ್ತಾರೆ. ಇದರಿಂದ ಕೆಟ್ಟ ಪ್ರವೃತ್ತಿಯೊಂದನ್ನು ಬೆಳೆಸಿದಂತಾಗುತ್ತದೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ಹೇಳಿದ್ದಾರೆ. ರಾಜ್ಯದ ಬಹುತೇಕ ಎಲ್ಲಾ ಶಾಲೆಗಳು ಶೇಕಡಾ 70 ರಷ್ಟು ಪಠ್ಯಕ್ರಮವನ್ನು ಪೂರ್ಣಗೊಳಿಸಿವೆ. ವಿದ್ಯಾರ್ಥಿಗಳಿಗೆ ಸಹಾಯಕವಾಗಲು ಶೇಕಡಾ 30 ರಷ್ಟು ಪಠ್ಯಕ್ರಮ ಕಡಿಮೆ ಮಾಡಲಾಗಿದೆ. ಫೆಬ್ರವರಿ ಕೊನೆಯ ವಾರದಲ್ಲಿ ಅಥವಾ ಮಾರ್ಚ್ ಮೊದಲ ವಾರದಲ್ಲಿ ಕೋವಿಡ್ ತೀವ್ರವಾಗಿ ಕಡಿಮೆಯಾಗಲಿದೆ, ಆದರೆ ಎಸ್‌.ಎಸ್‌.ಎಲ್‌.ಸಿ ಪರೀಕ್ಷೆಗಳು ಮಾರ್ಚ್‌ನಿಂದ ಏಪ್ರಿಲ್ 11 ರ ಕೊನೆಯ ವಾರದಲ್ಲಿ ನಡೆಯಲಿವೆ. ಆ ಸಮಯದ ಪರಿಸ್ಥಿತಿ ಅವಲೋಕಿಸಿ ನಿರ್ಧಾರ ಕೈಗೊಳ್ಳಲಿದ್ದೇವೆ ಎಂದು ತಿಳಿಸಿದ್ದಾರೆ.









































































































































































error: Content is protected !!
Scroll to Top