Saturday, May 21, 2022
spot_img
Homeಸ್ಥಳೀಯ ಸುದ್ದಿಜ್ಞಾನಸುಧಾ : ಟಿ.ಬಿ. ಸೋಲಿಸಿ - ಕರ್ನಾಟಕ ಗೆಲ್ಲಿಸಿ ಅಭಿಯಾನದಂಗವಾಗಿ ರಸಪ್ರಶ್ನೆ ಸ್ಪರ್ಧೆ

ಜ್ಞಾನಸುಧಾ : ಟಿ.ಬಿ. ಸೋಲಿಸಿ – ಕರ್ನಾಟಕ ಗೆಲ್ಲಿಸಿ ಅಭಿಯಾನದಂಗವಾಗಿ ರಸಪ್ರಶ್ನೆ ಸ್ಪರ್ಧೆ

ಕಾರ್ಕಳ : ಜಿ.ಪಂ. ಉಡುಪಿ, ಜಿಲ್ಲಾ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ , ಜಿಲ್ಲಾ ಕ್ಷಯರೋಗ ನಿರ್ಮೂಲನಾ ಕೇಂದ್ರ, ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ ಕಾರ್ಕಳ, ಕ್ಷಯ ಘಟಕ ಕಾರ್ಕಳ, ಭಾರತೀಯ ರೆಡ್ ಕ್ರಾಸ್ ಸೊಸೈಟಿ ಆಶ್ರಯದಲ್ಲಿ, ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಪ್ರಾಯೋಜಕತ್ವದಲ್ಲಿ ಟಿಬಿ ಸೋಲಿಸಿ ಕರ್ನಾಟಕ ಗೆಲ್ಲಿಸಿ ಅಭಿಯಾನದಂಗವಾಗಿ ಜ. 24ರಂದು ಜ್ಞಾನಸುಧಾ ಕಾಲೇಜಿನಲ್ಲಿ ತಾಲೂಕು ಪದವಿ ವಿದ್ಯಾರ್ಥಿಗಳಿಗೆ ಕ್ಷಯ ರೋಗ ಹಾಗೂ ಅದರ ನಿರ್ಮೂಲನೆ ಕುರಿತು ನಡೆದ ರಸಪ್ರಶ್ನೆ ಸ್ಪರ್ಧೆಯಲ್ಲಿ ಕಾರ್ಕಳ ಎಂಪಿಎಂ ಸರಕಾರಿ ಪ್ರಥಮ ದರ್ಜೆ ಕಾಲೇಜು ತಂಡದ ಕುಮಾರಿ ಎಂ. ವಿನಯ ನಾಥು ಹಾಗೂ ರಾಜೇಶ್ವರಿ ಪ್ರಥಮ ಸ್ಥಾನ ಗಳಿಸಿರುತ್ತಾರೆ.

ಶ್ರೀ ಭುವನೇಂದ್ರ ಕಾಲೇಜಿನ ಕುಮಾರಿ ಅಶ್ವಿತಾ ಹಾಗೂ ಪ್ರತೀತಾ ಕೆ.ಎ. ದ್ವಿತೀಯಾ, ಹೆಬ್ರಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ನರಸಿಂಹ ಹಾಗೂ ಶಿವನ ಗೌಡ ತೃತೀಯಾ ಸ್ಥಾನ ಪಡೆದುಕೊಂಡರು.

ಉದ್ಘಾಟನ ಸಮಾರಂಭ
ರೆಡ್ ಕ್ರಾಸ್ ಸೊಸೈಟಿ ಕಾರ್ಕಳ ಘಟಕದ ಅಧ್ಯಕ್ಷ ಡಾ.ಕೆ. ರಾಮಚಂದ್ರ ಜೋಶಿ ರಸಪ್ರಶ್ನೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು 2025 ಕ್ಕೆ ಕ್ಷಯಮುಕ್ತ ಭಾರತ ಮಾಡುವ ಸಂಕಲ್ಪದೊಂದಿಗೆ ಆರೋಗ್ಯ ಇಲಾಖೆ ಬಹಳ ಮುತುವರ್ಜಿ ವಹಿಸಿ ಕೆಲಸ ನಿರ್ವಹಿಸುತ್ತಿದೆ. ಈ ನಿಟ್ಟಿನಲ್ಲಿ ಕಾರ್ಕಳ ತಾಲೂಕು ಕ್ಷಯ ಘಟಕ ನಿರಂತರವಾಗಿ ಜನಜಾಗೃತಿ ಮೂಡಿಸುತ್ತಿರುವುದು ಉತ್ತಮ ವಿಚಾರವೆ. ಸಂಘ ಸಂಸ್ಥೆಗಳು, ಖಾಸಗಿ ಆಸ್ಪತ್ರೆ, ಕ್ಲಿನಿಕ್ ಹಾಗೂ ನರ್ಸಿಂಗ್ ಹೋಂ ಗಳು ಈ ನಿಟ್ಟಿನಲ್ಲಿ ಇಲಾಖೆಯೊಂದಿಗೆ ಕೈ ಜೋಡಿಸಬೇಕೆಂದರು.

ತಾಲೂಕು ಆರೋಗ್ಯಾಧಿಕಾರಿ ಡಾ. ಕೃಷ್ಣಾನಂದ ಶೆಟ್ಟಿ ಮಾತನಾಡಿ, ಕ್ಷಯ ಮುಕ್ತ ಭಾರತ ಮಾಡುವ ನಿಟ್ಟಿನಲ್ಲಿ ಎಲ್ಲರ ಸಹಕಾರ ಬೇಕು. ಕೋವಿಡ್‌ ಸಂದರ್ಭ ಕಾರ್ಕಳ ಜ್ಞಾನಸುಧಾ ಸಂಸ್ಥೆ ನೀಡಿದ ಅಪಾರವಾದುದು ಎಂದರು.

ಅಜೆಕಾರು ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ ನ ಟ್ರಸ್ಟಿ ಕರುಣಾಕರ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಕಾರ್ಕಳ ಕ್ಷಯ ಘಟಕದ ಹಿರಿಯ ಕ್ಷಯರೋಗ ಚಿಕಿತ್ಸಾ ಮೇಲ್ವಿಚಾರಕ ಶಿವಕುಮಾರ್ ಸ್ವಾಗತಿಸಿ, ಶಿಕ್ಷಕಿ ಸಂಗೀತಾ ಕುಲಾಲ್‌ ಕಾರ್ಯಕ್ರಮ ನಿರೂಪಿಸಿದರು. ಕಾಲೇಜಿನ ಪಿಆರ್‌ಒ ಜ್ಯೋತಿ ಪದ್ಮನಾಭ ಭಂಡಿ ವಂದಿಸಿದರು.
ಜ್ಞಾನಸುಧಾದ ಶಿಕ್ಷಕ ಡಾ. ಪ್ರಜ್ವಲ್ ಕುಲಾಲ್ ಹಾಗೂ ಬ್ರಹ್ಮಾವರ ಕ್ಷಯ ಘಟಕದ ಹಿರಿಯ ಕ್ಷಯರೋಗ ಚಿಕಿತ್ಸಾ ಮೇಲ್ವಿಚಾರಕ ಮಂಜುನಾಥ್ ಕ್ವಿಝ್ ಮಾಸ್ಟರ್ ಗಳಾಗಿದ್ದರು. ರಸಪ್ರಶ್ನೆ ಸ್ಪರ್ಧೆ ನ್ಯೂಸ್‌ ಕಾರ್ಕಳದಲ್ಲಿ ನೇರಪ್ರಸಾರಗೊಂಡಿತು.

ಕಾರ್ಕಳ ಎಂಪಿಎಂ ಸರಕಾರಿ ಪ್ರಥಮ ದರ್ಜೆ ಕಾಲೇಜು

ಶ್ರೀ ಭುವನೇಂದ್ರ ಕಾಲೇಜು
ಹೆಬ್ರಿ ಸರಕಾರಿ ಪ್ರಥಮ ದರ್ಜೆ ಕಾಲೇಜು

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!