ಕಾಂತಾವರ : ತೆಂಕುತಿಟ್ಟಿನ ಪ್ರಸಿದ್ಧ ಕಲಾವಿದ ಮುಳಿಯಾಲ ಭೀಮ ಭಟ್‌ ಅಸ್ತಂಗತ

ಕಾರ್ಕಳ : ತೆಂಕುತಿಟ್ಟಿನ ಪ್ರಸಿದ್ಧ ಹಿರಿಯ ಯಕ್ಷಗಾನ ಕಲಾವಿದ ಮುಳಿಯಾಲ ಭೀಮ ಭಟ್‌ (85ವ.) ಜ. 25ರಂದು ಅಸ್ತಂಗತರಾದರು. ಕೆಲದಿನಗಳಿಂದ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಮಂಗಳವಾರ ಮುಂಜಾನೆ ಕಾಂತಾವರದಲ್ಲಿ ಕೊನೆಯುಸಿರೆಳೆದರು.
ಕಳೆದ 20 ವರ್ಷಗಳಿಂದ ಕಾಂತಾವರ ದೇವಸ್ಥಾನದಲ್ಲಿ ಸೇವೆ ಮಾಡಿದ ಭೀಮ ಭಟ್‌ 1951ರಲ್ಲಿ ಶಾಸ್ತ್ರಿಗಳ ಸಂಚಾಲಕತ್ವದ ಶ್ರೀ ಧರ್ಮಸ್ಥಳ ಮೇಳದಿಂದ ಕಲಾ ಜೀವನ ಆರಂಭಿಸಿದ್ದರು. ಕೋಡಂಗಿ, ಬಾಲಗೋಪಾಲ, ಮುಖ್ಯ ಸ್ತ್ರೀವೇಷ, ಪೀಠಿಕೆ ವೇಷ ಎಲ್ಲ ಪಾತ್ರಗಳಿಗೂ ಜೀವ ತುಂಬಿದ್ದರು. ಏಳು ವರುಷ ಧರ್ಮಸ್ಥಳ ಮೇಳದ ತಿರುಗಾಟ ಮಾಡಿ 1958ರಿಂದ ಕಟೀಲು ಮೇಳಕ್ಕೆ ಸೇರಿ ಕಲಾಭಿಮಾನಿಗಳಿಗೆ ‘ದೇವಿ ಭಟ್ರು’ ಎಂದೇ ಪರಿಚಿತರಾಗಿದ್ದರು. ಶ್ರೀ ದೇವಿ ಮಹಾತ್ಮೆ ಪ್ರಸಂಗದ ‘ಶ್ರೀದೇವಿ’ಯ ಪಾತ್ರಧಾರಿಯಾಗಿ, ಪ್ರಮೀಳೆ, ಶಶಿಪ್ರಭೆ, ಮೀನಾಕ್ಷಿಯಂತಹ ಗಂಡುಗತ್ತಿನ ಪಾತ್ರಗಳ ಮೂಲಕ ಜನರ ಮೆಚ್ಚುಗೆಗೆ ಭಾಜನರಾಗಿದ್ದರು. ಇವರ ತಂದೆ ಕೇಶವ ಭಟ್‌ ಅವರು ಯಕ್ಷಗಾನ ಕಲಾವಿದರಾಗಿದ್ದರು. ಹೀಗಾಗಿ ಬಾಲ್ಯದಿಂದಲೇ ಯಕ್ಷಗಾನದತ್ತ ಭೀಮ ಭಟ್‌ ಆಕರ್ಷಿತರಾಗಿದ್ದರು.









































































































error: Content is protected !!
Scroll to Top