ಬೆಂಗಳೂರು: ಸಂಗೊಳ್ಳಿ ರಾಯಣ್ಣನ ಹೆಸರಿನಲ್ಲಿ ಸರ್ಕಾರ ಬರೋಬ್ಬರಿ 180 ಕೋಟಿ ರೂ.ಗಳ ವೆಚ್ಚದಲ್ಲಿ ಬೃಹತ್ ಮಿಲಿಟರಿ ಶಾಲೆಯನ್ನು ಪ್ರಾರಂಭಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ಅವರ 191 ನೇ ಸ್ಮರಣಾರ್ಥವಾಗಿ ರಾಯಣ್ಣನ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಮಾತನಾಡಿದ ಸಿಎಂ ಬೊಮ್ಮಾಯಿ, ಸಂಗೊಳ್ಳಿ ರಾಯಣ್ಣನ ಗುಣಧರ್ಮಗಳಾದ ದೇಶಭಕ್ತಿ, ಸ್ವಾಮಿ ಭಕ್ತಿ, ನಿಷ್ಠೆ, ಧೈರ್ಯ ಶೌರ್ಯ, ಸಾಹಸ ಗುರಿಗಳನ್ನು ಪ್ರಚಲಿತ ಸಮಾಜದಲ್ಲಿ ಜೀವಂತವಾಗಿಡಬೇಕು. ಆ ನಿಟ್ಟಿನಲ್ಲಿ ಎಲ್ಲಾ ಶಾಲಾ ಕಾಲೇಜುಗಳಲ್ಲಿ ಸಂಗೊಳ್ಳಿ ರಾಯಣ್ಣನ ಭಾವಚಿತ್ರ ಹಾಕಿಸಲು ಆದೇಶ ಹೊರಡಿಸಲಾಗುವುದು ಎಂದು ಹೇಳಿದರು.
ಈಗಾಗಲೇ ಈ ಉದ್ದೇಶಕ್ಕಾಗಿ ಸರ್ಕಾರ 55 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದ್ದು, ಇದೇ ವರ್ಷ ಶಾಲೆಯ ಕಾಮಗಾರಿ ಪೂರ್ಣಗೊಳ್ಳಲಿದೆ. ರಕ್ಷಣಾ ಇಲಾಖೆ ಶಾಲೆಯ ಉಸ್ತುವಾರಿಯನ್ನು ವಹಿಸಿಕೊಳ್ಳಲು ಮಾತುಕತೆ ನಡೆದಿದೆ. ಪರಿಶೀಲನಾ ಕಾರ್ಯವೂ ನಡೆದಿದ್ದು, ರಕ್ಷಣಾ ಇಲಾಖೆ ಅದನ್ನು ಮಿಲಿಟರಿ ಶಾಲೆಯಾಗಿ ಪರಿವರ್ತನೆ ಮಾಡಲಿದೆ. ಹಾಸ್ಟೆಲ್, ಸೇರಿದಂತೆ ಅಗತ್ಯ ವ್ಯವಸ್ಥೆಗಳನ್ನು 100 ಎಕರೆ ಪ್ರದೇಶದಲ್ಲಿ ನಿರ್ಮಿಸಲಾಗುತ್ತಿದೆ. ನವದೆಹಲಿಯಲ್ಲಿ ಕಿತ್ತೂರು ರಾಣಿ ಚನ್ನಮ್ಮನ ಪ್ರತಿಮೆಯಿದೆ. ಚನ್ನಮ್ಮಳಿದ್ದಲ್ಲಿ ರಾಯಣ್ಣ ಸಹ ಇರಬೇಕು. ಹಾಗಾಗಿ ನವದೆಹಲಿಯಲ್ಲಿ ಸೂಕ್ತ ಸ್ಥಳವನ್ನಾರಿಸಿ ರಾಯಣ್ಣನ ಪ್ರತಿಮೆ ಸ್ಥಾಪನೆಗೆ ಈಗಾಗಲೇ ಸಂಬಂಧ ಪಟ್ಟವರಿಗೆ ಪತ್ರ ಬರೆಯಲಾಗಿದೆ ಎಂದರು.
ಸುವರ್ಣ ಸೌಧದ ಮುಂದೆ ಕಿತ್ತೂರು ರಾಣಿ ಚೆನ್ನಮ್ಮ ಮತ್ತು ಸಂಗೊಳ್ಳಿ ರಾಯಣ್ಣನ ಮೂರ್ತಿ ಸ್ಥಾಪನೆ ಮಾಡುವುದಾಗಿ ಘೋಷಿಸಲಾಗಿದೆ. ಮೂರ್ತಿ ಮಾಡುವವರೊಂದಿಗೆ ಈಗಾಗಲೇ ಮಾತುಕತೆ ನಡೆದಿದ್ದು ಆದಷ್ಟು ಶೀಘ್ರದಲ್ಲಿ ಈ ಮೂರ್ತಿಗಳು ಸ್ಥಾಪನೆಯಾಗಲಿವೆ ಎಂದರು.
ಬ್ರಿಟಿಷರ ವಿರುದ್ಧ ಕೆಚ್ಚೆದೆಯಿಂದ ಹೋರಾಡಿ ಪ್ರಾಣ ತ್ಯಾಗ ಮಾಡಿದ್ದ ಕಿತ್ತೂರು ರಾಜವಂಶದ ರಕ್ಷಣೆಗೆ ನಿಂತಿದ್ದ ಸಂಗೊಳ್ಳಿ ರಾಯಣ್ಣನ ಜನ್ಮಸ್ಥಳ ಸಂಗೊಳ್ಳಿಯಲ್ಲಿ ಸೈನಿಕ ಶಾಲೆಯನ್ನು ಶೀಘ್ರದಲ್ಲೇ ತೆರೆಯಲಾಗುವುದು ಎಂದು ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ತಿಳಿಸಿದರು.
ವರ್ಷಾಂತ್ಯದ ವೇಳೆಗೆ ಸಂಗೊಳ್ಳಿ ರಾಯಣ್ಣ ಹೆಸರಿನಲ್ಲಿ ಮಿಲಿಟರಿ ಶಾಲೆ: ಸಿಎಂ ಬೊಮ್ಮಾಯಿ
Recent Comments
ಕಗ್ಗದ ಸಂದೇಶ
on