ಫೆಬ್ರವರಿ 14 ರಿಂದ ಫೆಬ್ರವರಿ 25ರ ವರೆಗೆ ಜಂಟಿ ಅಧಿವೇಶನ : ಸಿಎಂ ಬೊಮ್ಮಾಯಿ

ಬೆಂಗಳೂರು: ಫೆಬ್ರವರಿ 14 ರಿಂದ ಫೆಬ್ರವರಿ 25ರ ವರೆಗೆ ಜಂಟಿ ಅಧಿವೇಶನ ಕರೆಯಲು ತೀರ್ಮಾನಿಸಲಾಗಿದೆ. ಮಾರ್ಚ್ ಮೊದಲ ವಾರದಲ್ಲಿ ಬಜೆಟ್ ಮಂಡಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ.
ಜ.27 ರಂದು ತಮ್ಮ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಫೆಬ್ರವರಿ 14 ರಿಂದ ಜಂಟಿ ಅಧಿವೇಶನ ಕರೆಯಲು ನಿರ್ಧರಿಸಲಾಗಿದೆ. ಮಾರ್ಚ್ ಮೊದಲ ವಾರದಲ್ಲಿ 2022-23ನೇ ಸಾಲಿನ ಬಜೆಟ್ ಮಂಡಿಸಲಾಗುವುದು ಎಂದರು.
ಇಂದಿನ ಸಚಿವ ಸಂಪುಟ ಸಭೆಯಲ್ಲಿ ಕೋವಿಡ್ ಸ್ಥಿತಿಗತಿ, ಮುಂದಿನ ದಿನಗಳಲ್ಲಿ ಕೋವಿಡ್ ನಿರ್ವಹಣೆ ,ನಿಯಮ ಸಡಿಲಿಕೆ ಬಗ್ಗೆ ಬೇರೆ ಬೇರೆ ವಲಯದವರ ಮನವಿ, ಶಾಲಾ ಕಾಲೇಜುಗಳ ವಿಚಾರದ ಹೀಗೆ ಹಲವಾರು ವಿಷಯಗಳ ಬಗ್ಗೆ ಚರ್ಚೆ ಮಾಡಿದ್ದೇವೆ. ನಿಯಮಗಳ ಸಡಿಲಿಕೆ ಬಗ್ಗೆ ತಜ್ಞರ ವರದಿ ಬಂದ ಬಳಿಕ ಸಭೆ ನಡೆಸಿ ಕೂಲಂಕುಶವಾಗಿ ಚರ್ಚಿಸಿ ನಿರ್ಧಾರ ಮಾಡಲಾಗುವುದು ಎಂದರು.













































error: Content is protected !!
Scroll to Top