ಬೆಂಗಳೂರು: ತಮ್ಮ ನೇತೃತ್ವದ ಸರ್ಕಾರ 6 ತಿಂಗಳು ಪೂರೈಸಿದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಶುಕ್ರವಾರ 6 ತಿಂಗಳ ಸರ್ಕಾರದ ಸಾಧನೆಗಳನ್ನು ಒಳಗೊಂಡ ಭವ್ಯ ಭವಿಷ್ಯಕ್ಕಾಗಿ ಭರವಸೆಯ ಹೆಜ್ಜೆಗಳು ಎಂಬ ಶೀರ್ಷಿಕೆಯುಳ್ಳ ಸಾಧನಾ ಪುಸ್ತಕವನ್ನು ಬಿಡುಗಡೆಗೊಳಿಸಿದ್ದಾರೆ.
ಜ.28 ರಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಪುಸ್ತಕವನ್ನು ಬಿಡುಗಡೆ ಮಾಡಿದರು. ಭವ್ಯ ಭವಿಷ್ಯಕ್ಕಾಗಿ ಭರವಸೆಯ ಹೆಜ್ಜೆಗಳು ಎಂಬ 82 ಪುಟಗಳ ಪುಸ್ತಕವನ್ನು ಮುಖ್ಯಮಂತ್ರಿಗಳು ಬಿಡುಗಡೆ ಮಾಡಿದ್ದು, ಪುಸ್ತಕದ ಮುಖಪುಟದಲ್ಲಿ ಪ್ರಧಾನಿ ಮೋದಿ ಭಾವಚಿತ್ರವಿದೆ.
ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಸಚಿವರಾದ ಕೆ.ಎಸ್. ಈಶ್ವರಪ್ಪ, ಎಸ್.ಟಿ. ಸೋಮಶೇಖರ್, ಬಿ.ಸಿ. ಪಾಟೀಲ್, ಉಮೇಶ್ ಕತ್ತಿ, ಗೋಪಾಲಯ್ಯ, ಡಾ. ಸುಧಾಕರ್, ಭೈರತಿ ಬಸವರಾಜ, ವಿ. ಸೋಮಣ್ಣ, ಗೋವಿಂದ ಕಾರಜೋಳ, ಎಸ್. ಅಂಗಾರ, ಬಿ.ಸಿ. ನಾಗೇಶ್, ಎಂಟಿಬಿ ನಾಗರಾಜ್, ಸಂಸದ ಪಿ.ಸಿ. ಮೋಹನ್ ಉಪಸ್ಥಿತರಿದ್ದರು.
ʼಭವ್ಯ ಭವಿಷ್ಯಕ್ಕಾಗಿ ಭರವಸೆಯ ಹೆಜ್ಜೆಗಳುʼ ಪುಸ್ತಕ ಬಿಡುಗಡೆ
Recent Comments
ಕಗ್ಗದ ಸಂದೇಶ
on