Tuesday, May 17, 2022
spot_img
Homeಸುದ್ದಿಫೆ. 6 : ಅಂತರ್ ಶಾಲಾ ರಸಪ್ರಶ್ನೆ ಸ್ಪರ್ಧೆ

ಫೆ. 6 : ಅಂತರ್ ಶಾಲಾ ರಸಪ್ರಶ್ನೆ ಸ್ಪರ್ಧೆ

ಕಾಂತಾವರ : ಪ್ರಕೃತಿ ಸಮೂಹ ಸಂಸ್ಥೆಗಳ ಆಶ್ರಯದಲ್ಲಿ 7 ಮತ್ತು 10 ನೇ ತರಗತಿಯ ವಿದ್ಯಾರ್ಥಿಗಳಿಗಾಗಿ ಅಂತರ್‌ ಶಾಲಾ ರಸಪ್ರಶ್ನೆ ಸ್ಪರ್ಧೆ ಫೆ. 6ರಂದು ನಡೆಯಲಿದೆ.
ರಸಪ್ರಶ್ನಾ ಸ್ಪರ್ಧೆಯು ಸಿಬಿಎಸ್‌ ಸಿ ಮತ್ತು ರಾಜ್ಯ ಪಠ್ಯ ಕ್ರಮದ ವಿಷಯಾಧಾರಿತವಾಗಿದ್ದು, ಫೆ. 6 ರಂದು ಬೆಳಗ್ಗೆ 10 ಗಂಟೆಗೆ ಪ್ರಕೃತಿ ವಿದ್ಯಾ ಸಂಸ್ಥೆಯಲ್ಲಿ ನಡೆಯಲಿದೆ. ಒಂದು ತಂಡದಲ್ಲಿ 5 ವಿದ್ಯಾರ್ಥಿಗಳು ಭಾಗವಹಿಸಬಹುದಾಗಿದೆ. ವಿಜೇತರಿಗೆ ಪ್ರಥಮ 10 ಸಾವಿರ ರೂ, ದ್ವಿತೀಯ 7 ಸಾವಿರ ರೂ, ತೃತೀಯಾ 3 ಸಾವಿರ ರೂ. ಬಹುಮಾನ ನೀಡಲಾಗುವುದು ಹಾಗೂ ಭಾಗವಹಿಸಿದ ಎಲ್ಲ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಲಾಗುವುದು.
ಉತ್ತಮ ಪ್ರದರ್ಶನ ತೋರಿದ 30 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಪಡೆದುಕೊಳ್ಳುವ ಅವಕಾಶವಿದ್ದು, ಹೆಸರು ನೋಂದಾವಣೆಗೆ ಫೆ. 3 ಕೊನೆಯ ದಿನಾಂಕವಾಗಿದೆ ಎಂದು ಪೃಕೃತಿ ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ. ಹೆಚ್ಚಿನ ಮಾಹಿತಿಗಾಗಿ – 8762972999 ಸಂಪರ್ಕಿಸಬಹುದಾಗಿದೆ.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!