Thursday, May 26, 2022
spot_img
Homeಸುದ್ದಿಯುವಕರು ರಾಷ್ಟ್ರ ಮೊದಲು ಎಂಬ ಮನೋಭಾವದಿಂದ ಕೆಲಸ ಮಾಡುವ ದೇಶವನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ನರೆಂದ್ರ...

ಯುವಕರು ರಾಷ್ಟ್ರ ಮೊದಲು ಎಂಬ ಮನೋಭಾವದಿಂದ ಕೆಲಸ ಮಾಡುವ ದೇಶವನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ನರೆಂದ್ರ ಮೋದಿ

ನವದೆಹಲಿ: ಸ್ಟಾರ್ಟ್‌ಅಪ್‌ಗಳಿಂದ ಹಿಡಿದು ಕ್ರೀಡೆಗಳವರೆಗಿನ ಎಲ್ಲಾ ಕ್ಷೇತ್ರಗಳಲ್ಲಿ ಸಾಧನೆ ಮಾಡುತ್ತಿರುವ ಭಾರತದ ಯುವ ಶಕ್ತಿಯನ್ನು ಶ್ಲಾಘಿಸಿದ ಪ್ರಧಾನಿ ನರೇಂದ್ರ ಮೋದಿ, ಯುವಕರು “ದೇಶವೇ ಮೊದಲು” ಎಂಬ ಮನೋಭಾವದಿಂದ ಕೆಲಸ ಮಾಡುವ ದೇಶವನ್ನು ಯಾರೂ ತಡೆಯಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
ಜ.೨೮ ರಂದು ದೆಹಲಿಯ ಕರಿಯಪ್ಪ ಮೈದಾನದಲ್ಲಿ ರಾಷ್ಟ್ರೀಯ ಕೆಡೆಟ್ ಕಾರ್ಪ್ಸ್(ಎನ್ ಸಿಸಿ) ರ್ಯಾಲಿ ಉದ್ದೇಶಿಸಿ ಮಾತನಾಡಿದ ಮೋದಿ, ಎನ್ ಸಿಸಿಯನ್ನು ಬಲಿಪಡಿಸಲು ಕೇಂದ್ರ ಸರ್ಕಾರ ಹಲವು ಕ್ರಮಗಳನ್ನು ತೆಗೆದುಕೊಂಡಿದೆ. ಈ ಸಂಬಂಧ ಉನ್ನತ ಮಟ್ಟದ ಪರಿಶೀಲನಾ ಸಮಿತಿ ರಚಿಸಿದ್ದು, ಎನ್ ಸಿಸಿ ಬಲಪಡಿಸಲು ಪ್ರಯತ್ನಿಸಲಾಗುತ್ತಿದೆ ಎಂದು ಹೇಳಿದರು.
ಕಳೆದ ಎರಡು ವರ್ಷಗಳಲ್ಲಿ ಗಡಿ ಪ್ರದೇಶಗಳಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಹೊಸ ಎನ್‌ಸಿಸಿ ಕೆಡೆಟ್‌ಗಳನ್ನು ಸೇರಿಸಲಾಗಿದೆ. ಎನ್ ಸಿಸಿಯಲ್ಲಿ ಬಾಲಕಿಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುತ್ತಿದ್ದಾರೆ ಎಂದ ಪ್ರಧಾನಿ, ಸಶಸ್ತ್ರ ಪಡೆಗಳಲ್ಲಿ ಮಹಿಳೆಯರು ಅತೀಹೆಚ್ಚು ಜವಾಬ್ದಾರಿಗಳನ್ನು ವಹಿಸಿಕೊಳ್ಳುತ್ತಿದ್ದಾರೆ ಎಂದರು.
ಡಿಜಿಟಲ್ ತಂತ್ರಜ್ಞಾನ ಮತ್ತು ಮಾಹಿತಿ ಕ್ಷೇತ್ರಕ್ಕೆ ಸಂಬಂಧಿಸಿದ ಯುಗದಲ್ಲಿ ತಪ್ಪು ಮಾಹಿತಿಯ ಅಪಾಯಗಳೂ ಇವೆ. ಎನ್‌ಸಿಸಿ ಸದಸ್ಯರು ಇದಕ್ಕಾಗಿ ಜಾಗೃತಿ ಅಭಿಯಾನವನ್ನು ನಡೆಸಬೇಕು ಎಂದು ಪ್ರಧಾನಿ ಮೋದಿ ಹೇಳಿದರು.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!