Saturday, May 21, 2022
spot_img
Homeರಾಜ್ಯಮಾಜಿ ಸಿಎಂ ಬಿಎಸ್‌ವೈ ಮೊಮ್ಮಗಳು ಆತ್ಮಹತ್ಯೆ

ಮಾಜಿ ಸಿಎಂ ಬಿಎಸ್‌ವೈ ಮೊಮ್ಮಗಳು ಆತ್ಮಹತ್ಯೆ

ಬೆಂಗಳೂರು: ರಾಜ್ಯದ ಮಾಜಿ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಅವರ ಮೊಮ್ಮಗಳು ಸೌಂದರ್ಯ (30) ಅವರು ಅಪಾರ್ಟ್‌ಮೆಂಟ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ.

ಇಂದು ಬೆಳಗ್ಗೆ ಸುಮಾರು 10 ಗಂಟೆ ಸುಮಾರಿಗೆ ತನ್ನ ಕೋಣೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದ್ದು, ಸೌಂದರ್ಯ ಅವರು ಬಿಎಸ್‌ ಯಡಿಯೂರಪ್ಪ ಅವರ ಎರಡನೇ ಪುತ್ರಿ ಪದ್ಮಾವತಿ ಅವರ ಮಗಳಾಗಿದ್ದಾರೆ. ಘಟನೆ ಸಂಬಂಧ ನಗರದ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಈಗಾಗಲೇ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಮೃತ ಸೌಂದರ್ಯ ಅವರು ಬೆಂಗಳೂರಿನ ವಸಂತ ನಗರದಲ್ಲಿರುವ ಮೌಂಟ್ ಕಾರ್ಮೆಲ್ ಕಾಲೇಜು ಬಳಿಯ ಫ್ಲ್ಯಾಟ್‌ನಲ್ಲಿ ವಾಸಿಸುತ್ತಿದ್ದರು. ಬೆಂಗಳೂರಿನ ರಾಮಯ್ಯ ಆಸ್ಪತ್ರೆಯಲ್ಲಿ ವೈದ್ಯೆಯಾಗಿದ್ದ ಸೌಂದರ್ಯಗೆ 2018ರಲ್ಲಿ ವೈದ್ಯ ಡಾ. ನೀರಜ್‌ ಅವರ ಜೊತೆ ವಿವಾಹವಾಗಿತ್ತು. ಮೇಲ್ನೋಟಕ್ಕೆ ಕೌಟುಂಬಿಕ ಸಮಸ್ಯೆ ಇರಬಹುದೆಂದು ಅಂದಾಜಿಸಲಾಗಿದ್ದು, ಸೌಂದರ್ಯ ಅವರ ಆತ್ಮಹತ್ಯೆಗೆ ಸ್ಪಷ್ಟ ಕಾರಣ ಇನ್ನಷ್ಟೇ ತಿಳಿದುಬರಬೇಕಿದೆ.

ಸೌಂದರ್ಯಗೆ ಒಂದು ಮಗು ಇದ್ದು, ಪತಿ ಡಾ.ನೀರಜ್ ಅವರು ಬೆಳಗ್ಗೆ 8 ಗಂಟೆಗೆ ಕೆಲಸಕ್ಕೆ ಹೋಗಿದ್ದರು. ಗಂಡ ಕೆಲಸಕ್ಕೆ ಹೋದ ಬಳಿಕ ಸೌಂದರ್ಯ 10 ಗಂಟೆಯ ವೇಳೆಗೆ ತನ್ನ ಕೋಣೆಯನ್ನು ಲಾಕ್‌ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮನೆ ಕೆಲಸದವರು ಬಂದಾಗ ಬಾಗಿಲು ತೆಗೆಯದಿದ್ದಾಗ ಸೌಂದರ್ಯ ಪತಿ ಡಾ. ನೀರಜ್‌ಗೆ ಕೆಲಸದವರು ಕರೆ ಮಾಡಿದ್ದರು. ಮನೆ ಕೆಲಸದವರು ಫೋನ್ ಮಾಡಿದ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!