ಬೆಂಗಳೂರು: ರಾಜ್ಯದಲ್ಲಿ ಆಶ್ರಯ ವಸತಿ ಯೋಜನೆಯ ವಾರ್ಷಿಕ ಆದಾಯ ಮಿತಿಯನ್ನು 32 ಸಾವಿರದಿಂದ 1.20 ಲಕ್ಷಕ್ಕೆ ಹೆಚ್ಚಿಸುವುದಾಗಿ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.
ಜ. 28 ರಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರಿ ವಸತಿ ಯೋಜನೆಯಡಿ ಮನೆ ಪಡೆಯಲು ಆದಾಯ ಮಿತಿ ಹೆಚ್ಚಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಮುಖ್ಯ ಕಾರ್ಯದರ್ಶಿ ಹಾಗೂ ವಸತಿ ಇಲಾಖೆ ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದ್ದಾರೆ ಎಂದು ಹೇಳಿದರು.
”ಯೋಜನೆಯಡಿ ಮನೆ ಪಡೆಯಲು ಆಕಾಂಕ್ಷಿಯಾಗಿರುವ ಅನೇಕ ಬಡವರು ಆದಾಯ ಮಿತಿಯನ್ನು ಹೆಚ್ಚಿಸುವಂತೆ ಒತ್ತಾಯಿಸುತ್ತಿರುವುದರ ಬಗ್ಗೆ ಸಿಎಂ ಗಮನಕ್ಕೆ ತಂದ ನಂತರ ಬದಲಾವಣೆ ಮಾಡಲು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ’ ಎಂದು ತಿಳಿಸಿದರು.
32,000 ರೂ.ಗಳ ಆದಾಯದ ಮಿತಿ ಇರುವುದರಿಂದ ಯೋಜನೆಯಡಿ ಮನೆ ಪಡೆಯಲು ಅರ್ಹರಾಗಿರುವ ಅನೇಕರ ಮೇಲೆ ಪರಿಣಾಮ ಬೀರುತ್ತಿದೆ, ಕೇಂದ್ರವು ಬಿಪಿಎಲ್ ಕುಟುಂಬಗಳ ಆದಾಯದ ಮಿತಿಯನ್ನು 1.20 ಲಕ್ಷ ರೂ.ಗೆ ಹೆಚ್ಚಿಸಿದೆ ಎಂದರು.
ಆಶ್ರಯ ವಸತಿ ಯೋಜನೆಗೆ ಆದಾಯ ಮಿತಿ ಹೆಚ್ಚಿಸಲು ಕ್ರಮ: ಆರಗ ಜ್ಞಾನೇಂದ್ರ
Recent Comments
ಕಗ್ಗದ ಸಂದೇಶ
on