Thursday, May 19, 2022
spot_img
Homeಸುದ್ದಿಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಇಂದು ಮಹತ್ವದ ಸಭೆ

ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಇಂದು ಮಹತ್ವದ ಸಭೆ

ಬೆಂಗಳೂರು: ಬೆಂಗಳೂರಿನಲ್ಲಿ ಕಳೆದೊಂದು ವಾರದಿಂದ ಕೊರೋನಾ ಮೂರನೇ ಅಲೆ ಸೋಂಕು ಕೊಂಚ ಕಡಿಮೆಯಾಗಿದ್ದು ಉಳಿದ ಜಿಲ್ಲೆಗಳಲ್ಲಿ ಸೋಂಕಿನ ಸಂಖ್ಯೆ ಹೆಚ್ಚುತ್ತಿದೆ. ಕಳೆದೆರಡು ಕೊರೋನಾ ಅಲೆಗಳಿಗೆ ಹೋಲಿಸಿದರೆ ಮೂರನೇ ಅಲೆಯ ತೀವ್ರತೆ ಕಡಿಮೆಯಿದ್ದು, ಸೋಂಕಿತರು ಆಸ್ಪತ್ರೆಗೆ ದಾಖಲಾಗದೆ ಮನೆಯಲ್ಲಿಯೇ ಇದ್ದು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.
ರಾಜ್ಯದಲ್ಲಿ ಕೊರೊನಾ ಸ್ಥಿತಿಗತಿ ಕುರಿತಂತೆ ಚರ್ಚಿಸಲು ಸಿ. ಎಂ ಬಸವರಾಜ್‌ ಬೊಮ್ಮಾಯಿ ಇಂದು ಮಧ್ಯಾಹ್ನ 1 ಗಂಟೆಗೆ ಗೃಹ ಕಚೇರಿ ‘ಕೃಷ್ಣಾ’ದಲ್ಲಿ ಸಭೆ ನಡೆಸಲಿದ್ದಾರೆ. ಕೋವಿಡ್ ನಿಯಂತ್ರಣಕ್ಕಾಗಿ ಹೊರಡಿಸಿರುವ ಮಾರ್ಗಸೂಚಿಗಳು ಇದೇ 31ರವರೆಗೆ ಜಾರಿಯಲ್ಲಿದ್ದು, ಅವುಗಳ ಮುಂದುವರಿಕೆ ಇಲ್ಲವೇ ಸಡಿಲಿಕೆ ಬಗ್ಗೆ ಮತ್ತು ಶಾಲೆ ಆರಂಭದ ಬಗ್ಗೆ ಸಭೆಯಲ್ಲಿ ಚರ್ಚೆಯಾಗಲಿದೆ.
ಸಭೆಯಲ್ಲಿ ಆರೋಗ್ಯ ಸಚಿವರು, ಕಂದಾಯ ಸಚಿವರು, ಗೃಹ ಸಚಿವರು, ಉನ್ನತ ಶಿಕ್ಷಣ ಸಚಿವರು, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು, ಇಲಾಖಾ ಕಾರ್ಯದರ್ಶಿಗಳು, ಸರ್ಕಾರದ ಮುಖ್ಯ ಕಾರ್ಯದರ್ಶಿ, ಬಿಬಿಎಂಪಿ ಆಯುಕ್ತ, ಹಿರಿಯ ಪೊಲೀಸ್ ಅಧಿಕಾರಿಗಳು, ಮತ್ತು ವೀಡಿಯೋ ಕಾನ್ಫರೆನ್ಸ್ ಮೂಲಕ ತಾಂತ್ರಿಕ ಸಲಹಾ ಸಮಿತಿ ಸದಸ್ಯರು ಹಾಗೂ ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಭಾಗಿಯಾಗಲಿದ್ದಾರೆ.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!