Thursday, May 19, 2022
spot_img
Homeಸುದ್ದಿನಮ್ಮ ಜವಾಬ್ದಾರಿಗಳ ಬಗ್ಗೆ ನಮಗೆ ಅರಿವಿದೆ : ಸಿದ್ದರಾಮಯ್ಯಗೆ ಬೊಮ್ಮಾಯಿ ಟಾಂಗ್

ನಮ್ಮ ಜವಾಬ್ದಾರಿಗಳ ಬಗ್ಗೆ ನಮಗೆ ಅರಿವಿದೆ : ಸಿದ್ದರಾಮಯ್ಯಗೆ ಬೊಮ್ಮಾಯಿ ಟಾಂಗ್

ಬೆಂಗಳೂರು: 2018ರ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ್ದ ಒಂದು ಭರವಸೆಯನ್ನೂ ರಾಜ್ಯ ಬಿಜೆಪಿ ಈಡೇರಿಸಿಲ್ಲ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ನೀಡಿದ್ದ ಹೇಳಿಕೆ ವಿರುದ್ಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಿಡಿಕಾರಿದ್ದಾರೆ.
ಸಿಎಂ ಬೊಮ್ಮಾಯಿ ಅವರು ಆರು ತಿಂಗಳ ಅಧಿಕಾರವನ್ನು ಪೂರ್ಣಗೊಳಿಸಿದ ನಂತರ, ತಮ್ಮ ಸರ್ಕಾರದ ಸಾಧನೆಗಳ ಕಿರುಪುಸ್ತಕವನ್ನು ಬಿಡುಗಡೆ ಮಾಡಿದ್ದರು. ಈ ಪುಸ್ತಕದ ಕುರಿತು ಸಿದ್ದರಾಮಯ್ಯ ಅವರು ವ್ಯಂಗ್ಯವಾಡಿದ್ದರು. ಪುಸ್ತಕದಲ್ಲಿ ಸಾಧನೆಗಳಿಗಿಂತ ಆಶ್ವಾಸನೆಗಳೇ ಹೆಚ್ಚಾಗಿವೆ ಎಂದು ಹೇಳಿದ್ದರು. ಈ ಹೇಳಿಕೆಗೆ‌ ಪ್ರತಿಕ್ರಯಿಸಿದ ಬೊಮ್ಮಾಯಿ ನಮ್ಮ ಜವಾಬ್ದಾರಿಗಳ ಬಗ್ಗೆ ನಮಗೆ ಅರಿವಿದೆ. ಅನೇಕ ಕಾರ್ಯಕ್ರಮಗಳನ್ನು ವಿದ್ಯಾರ್ಥಿಗಳು, ಯುವಕರು, ಮಹಿಳೆಯರು ಮತ್ತು ಎಸ್‌ಸಿ, ಎಸ್‌ಟಿಗಳ ಕಲ್ಯಾಣಕ್ಕಾಗಿ ನಾವು ಪ್ರಾರಂಭಿಸಿದ್ದೇವೆ. ನಮ್ಮ ಕೆಲಸದಲ್ಲಿ ತಪ್ಪು ಹುಡುಕುವ ಪ್ರಯತ್ನ ಮಾಡಬೇಡಿ ಎಂದು ಸಿದ್ದರಾಮಯ್ಯ ವಿರುದ್ಧ ಗುಡುಗಿದ್ದಾರೆ.
ಸಿದ್ದರಾಮಯ್ಯ ಅವರಿಂದ ಹೆಚ್ಚೇನೂ ನಿರೀಕ್ಷಿಸಲು ಸಾಧ್ಯವಿಲ್ಲ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಪ್ರಣಾಳಿಕೆಯಲ್ಲಿ ಶೇ.96 ರಷ್ಟು ಅನುಷ್ಠಾನಗೊಳಿಸಿದ್ದೇನೆಂದು ಹೇಳಿದ್ದಾರೆ. ಹಾಗಾದರೆ 2018ರ ಚುನಾವಣೆಯಲ್ಲೇಕೆ ಜನರು ಅವರನ್ನು ತಿರಸ್ಕರಿಸಿದರು ಎಂಬುದರ ಕುರಿತು ನೋಡಬೇಕಿದೆ ಎಂದು ತಿಳಿಸಿದರು. ಕೇವಲ ಕಾರ್ಯಕ್ರಮಗಳನ್ನು ಘೋಷಿಸಿದರೆ ಸಾಕಾಗುವುದಿಲ್ಲ, ಆದರೆ ಅವುಗಳನ್ನು ಜಾರಿಗೆ ತರಬೇಕು ಎಂದಿದ್ದಾರೆ.
ಕಾಂಗ್ರೆಸ್ ಎಂದಿಗೂ ಜನರ ಕಲ್ಯಾಣಕ್ಕಾಗಿ ಕೆಲಸ ಮಾಡಿಲ್ಲ. ಅವರು ಯಾವಾಗಲೂ ಅಧಿಕಾರಕ್ಕೆ ಬರಲು ಮತ್ತು ಅಧಿಕಾರವನ್ನು ತಮ್ಮ ಸ್ವಾರ್ಥಕ್ಕಾಗಿ ಬಳಸಿಕೊಳ್ಳಲು ಚಿಂತಿಸುತ್ತಿದ್ದರು ಎಂದು ತಿಳಿಸಿದರು.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!