ಕಾರ್ಕಳ : ಕಾರ್ಕಳ ಶ್ರೀಮದ್ ಭುವನೇಂದ್ರ ಪ್ರೌಢ ಶಾಲೆಯಲ್ಲಿ ಜ. 31ರಂದು ಕಾರ್ಕಳ ತಾಲೂಕು ಪ್ರೌಢಶಾಲಾ ಶಿಕ್ಷಕರ ಕಾರ್ಯಾಗಾರ ನಡೆಯಿತು. ಕ್ಷೇತ್ರ ಶಿಕ್ಷಾಣಾಧಿಕಾರಿ ವೆಂಕಟೇಶ್ ಜಿ. ನಾಯಕ್ ಕಾರ್ಯಾಗಾರ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಶಿಕ್ಷಕರು ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ತುಂಬುವ ಹಾಗೂ ಕಲಿಕೆಯಲ್ಲಿ ಆಸಕ್ತಿ ಹೊಂದುವಂತೆ ಮಾಡಬೇಕು. ವಿದ್ಯಾರ್ಥಿಗಳು ಹೆಚ್ಚಿನ ಅಂಕ ಗಳಿಸುವಂತೆ ಪರಿಣಾಮಕಾರಿ ಯೋಜನೆ ರೂಪಿಸಿಕೊಳ್ಳಬೇಕೆಂದರು.
ನೋಡಲ್ ಅಧಿಕಾರಿ ವೆಂಕಟರಮಣ ಕಲ್ಕೂರ, ಶಿಕ್ಷಣ ಸಂಯೋಜಕ ಬಾಲಕೃಷ್ಣ ನಾಯ್ಕ್, ಭುವನೇಂದ್ರ ವಿದ್ಯಾ ಸಂಸ್ಥೆಯ ಮುಖ್ಯ ಶಿಕ್ಷಕಿ ವೃಂದಾ ಶೆಣೈ, ಗಣಿತ ವಿಷಯ ಸಂಪನ್ಮೂಲ ಶಿಕ್ಷಕ ಆರ್. ನಾರಾಯಣ ಶೆಣೈ ಉಪಸ್ಥಿತರಿದ್ದರು.
ಕಾರ್ಯಾಗಾರ
ಕನ್ನಡ ಭಾಷಾ ವಿಷಯದ ಮತ್ತು ಫಲಿತಾಂಶ ವೃದ್ಧಿಸುವ ಬಗ್ಗೆ ವಿಶ್ರಾಂತ ಶಿಕ್ಷಕ ಮುನಿರಾಜ ರೆಂಜಾಳ, ಶಿಕ್ಷಕ ಪ್ರಭಾಕರ ಶೆಟ್ಟಿ ಕೊಂಡಳ್ಳಿ, ಶಿಕ್ಷಕ ಗಣೇಶ್ ಜಾಲ್ಸೂರು ಮಾಹಿತಿ ನೀಡಿದರು. ತಾಲೂಕಿನ ಎಲ್ಲ ಶಿಕ್ಷಕರು ಭಾಗವಹಿಸಿದ್ದರು. ಕಾರ್ಯಾಗಾರವು ಮೂರು ದಿನಗಳು ನಡೆಯಲಿದೆ.