ಬೆಂಗಳೂರು : ಫಲಾನುಭವಿಗಳಿಗೆ ನಿವೇಶನ, ಮನೆಗಳನ್ನು ಒದಗಿಸಲು ಕಾನೂನು ಸರಳೀಕರಣ : ಸಿಎಂ ಬೊಮ್ಮಾಯಿ

ಬೆಂಗಳೂರಿನ ಅರ್ಹ ಫಲಾನುಭವಿಗಳಿಗೆ ನಿವೇಶನ ಹಾಗೂ ಮನೆಗಳನ್ನು ಒದಗಿಸಲು ಕಾನೂನು ಸರಳೀಕರಣ ಮಾಡುವ ಅಗತ್ಯ ಇದೆ ಎಂದು ಜ.31ರಂದು ಬೆಂಗಳೂರಿನಲ್ಲಿ ನಡೆದ ರಾಜೀವ್ ಗಾಂಧಿ ವಸತಿ ನಿಯಮಿತದ ವಸತಿ ಯೋಜನೆಯಡಿ ಆಯ್ಕೆಯಾಗಿರುವ ಫಲಾನುಭವಿಗಳಿಗೆ ಹಂಚಿಕೆ ಪತ್ರ ವಿತರಿಸಿ ಮಾತನಾಡಿದರು. ಕಾನೂನುಬದ್ಧವಾಗಿ ಬಡಾವಣೆಗಳು ಅಭಿವೃದ್ಧಿಯಾಗದಿದ್ದರೆ, ಮೂಲಭೂತ ಸೌಕರ್ಯಗಳ ಕೊರತೆಗಳಿರುವ ಕಂದಾಯ ನಿವೇಶಗಳು ದೊಡ್ಡ ಸಂಖ್ಯೆಯಲ್ಲಿ ಹೆಚ್ಚಾಗುತ್ತವೆ. ಈ ಸಮಸ್ಯೆಗಳನ್ನು ನಿವಾರಿಸಲು ಹಾಗೂ ಬಡವರಿಗೆ ಮನೆ, ನಿವೇಶನ ಪಡೆಯಲು ಸರ್ಕಾರ ಕಾನೂನಿನ ಸರಳೀಕರಣ ಮಾಡಲಿದೆ ಎಂದರು.

error: Content is protected !!
Scroll to Top