ಹೆಬ್ರಿ ವಿಶ್ವಕರ್ಮ ಯುವ ವೃಂದ, ವಿಶ್ವಕರ್ಮ ಸಮಾಜ ಸೇವಾ ಸಂಘ ಹಾಗೂ ವಿಶ್ವಕರ್ಮ ಮಹಿಳಾ ಮಂಡಳಿ ವತಿಯಿಂದ 17ನೇ ಸಾರ್ವಜನಿಕ ಸತ್ಯನಾರಾಯಣ ಪೂಜೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಜ.31ರಂದು ಜರುಗಿತು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯುವ ವೃಂದದ ಅಧ್ಯಕ್ಷ ರಘುವೀರ್ ಆಚಾರ್ಯ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ನೆಕ್ಲಾಜೆ ಶ್ರೀ ಕಾಳಿಕಾಂಬಾ ದೇವಸ್ಥಾನದ ಆಡಳಿತ ಮೊಕ್ತೇಸರ ಶಿಲ್ಪಿ ರಾಮಚಂದ್ರ ಆಚಾರ್ಯ ಅತ್ತೂರು, ಕೊಕ್ಕರ್ಣೆ ವಿಶ್ವಕರ್ಮ ಸಮಾಜ ಸೇವಾ ಸಂಘದ ಅಧ್ಯಕ್ಷ ವಿಶ್ವನಾಥ ಆಚಾರ್ಯ ಕಲ್ಗೋಳಿ, ಹೆಬ್ರಿ ವಿಶ್ವಕರ್ಮ ಸಮಾಜ ಸೇವಾ ಸಂಘದ ಅಧ್ಯಕ್ಷ ರತ್ನಾಕರ ಆಚಾರ್ಯ, ವಿಶ್ವಕರ್ಮ ಮಹಿಳಾ ಮಂಡಳಿ ಅಧ್ಯಕ್ಷೆ ಕಲಾವತಿ ಶ್ರೀಧರ ಆಚಾರ್ಯ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ರಂಗೋಲಿ ಕಲಾವಿದ ಸೂರ್ಯ ಪುರೋಹಿತ್, ಪ್ರತಿಭಾನ್ವಿತ ವಿದ್ಯಾರ್ಥಿನಿ ಶ್ರದ್ಧಾ ಎಸ್. ಆಚಾರ್ಯ ಗುರುತಿಸಿ ಗೌರವಿಸಿ, ಸಮಾಜದ 12 ವಿದ್ಯಾರ್ಥಿಗಳಿಗೆ ಸಹಾಯಧನವನ್ನು ವಿತರಿಸಲಾಯಿತು. ನಂತರ ನೂತನವಾಗಿ ಆಯ್ಕೆಯಾದ ಪದಾಧಿಕಾರಿಗಳಿಗೆ ಅಧಿಕಾರ ಹಸ್ತಾಂತರಿಸಲಾಯಿತು. ಸಚಿನ್ ಆಚಾರ್ಯ ಸ್ವಾಗತಿಸಿ, ಭುವನೇಂದ್ರ ಆಚಾರ್ಯ ಧನ್ಯವಾದವಿತ್ತರು ಮತ್ತು ಚಂದ್ರಶೇಖರ್ ಆಚಾರ್ಯ ಕಾರ್ಯಕ್ರಮ ನಿರೂಪಿಸಿದರು.
Recent Comments
ಕಗ್ಗದ ಸಂದೇಶ
on