Thursday, May 26, 2022
spot_img
Homeಸುದ್ದಿ24 ವರ್ಷಗಳ ನಂತರ ಕಾಮನ್‌ ವೆಲ್ತ್‌ ಕ್ರೀಡಾಕೂಟದಲ್ಲಿ ಮಹಿಳಾ ಕ್ರಿಕೆಟ್‌ ತಂಡಕ್ಕೆ ಅವಕಾಶ

24 ವರ್ಷಗಳ ನಂತರ ಕಾಮನ್‌ ವೆಲ್ತ್‌ ಕ್ರೀಡಾಕೂಟದಲ್ಲಿ ಮಹಿಳಾ ಕ್ರಿಕೆಟ್‌ ತಂಡಕ್ಕೆ ಅವಕಾಶ

ಬರ್ಮಿಂಗ್ ಹ್ಯಾಮ್: 24 ವರ್ಷಗಳ ಸುದೀರ್ಘ ವಿರಾಮದ ನಂತರ ಕಾಮನ್‌ವೆಲ್ತ್ ಗೇಮ್ಸ್‌ಗೆ ಕ್ರಿಕೆಟ್ ಮರು ಪ್ರವೇಶಿಸಿದೆ. ಈ ವರ್ಷ ಜೂನ್‌ನಲ್ಲಿ ಬರ್ಮಿಂಗ್ ಹ್ಯಾಮ್(ಇಂಗ್ಲೆಂಡ್) ನಲ್ಲಿ ನಡೆಯಲಿರುವ 22ನೇ ಆವೃತ್ತಿಯಲ್ಲಿ ಕ್ರಿಕೆಟ್ ಅನ್ನು ಸೇರಿಸಲಾಗಿದೆ. ಆದರೆ ಈ ಬಾರಿ ಮಹಿಳಾ ಕ್ರಿಕೆಟ್ ತಂಡಗಳಿಗಗೆ ಮಾತ್ರ ಕಾಮನ್ ವೆಲ್ತ್ ಗೇಮ್ಸ್ ಫೆಡರೇಷನ್(ಸಿಜಿಎಫ್) ಅನುಮತಿ ನೀಡಿದೆ.
ಐಸಿಸಿ ಭಾರತ, ಆಸ್ಟ್ರೇಲಿಯಾ, ಇಂಗ್ಲೆಂಡ್, ನ್ಯೂಜಿಲೆಂಡ್, ಪಾಕಿಸ್ತಾನ, ಬಾರ್ಬಡೋಸ್, ದಕ್ಷಿಣ ಆಫ್ರಿಕಾ ಮತ್ತು ಶ್ರೀಲಂಕಾ ಸೇರಿ 8 ತಂಡಗಳಿಗೆ ಟಿ20 ಮಾದರಿಯಲ್ಲಿ ಭಾಗವಹಿಸಲು ಅವಕಾಶ ನೀಡಿದ್ದು ಇದು ಲೀಗ್-ಕಮ್-ನಾಕೌಟ್ ಮಾದರಿಯಲ್ಲಿ ನಡೆಯಲಿದೆ. ಪಂದ್ಯಗಳು ಜುಲೈ 29 ರಂದು ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಪಂದ್ಯದಿಂದ ಪ್ರಾರಂಭವಾಗಿ, ಆಗಸ್ಟ್ 7 ರಂದು ಗೋಲ್ಡ್ ಮೆಡಲ್ ಪಂದ್ಯದೊಂದಿಗೆ ಕೊನೆಗೊಳ್ಳುತ್ತವೆ. ಈ ಬಗ್ಗೆ ಐಸಿಸಿ ಮತ್ತು ಸಿಜಿಎಫ್ ಫೆ.1 ರ ಮಂಗಳವಾರ ಜಂಟಿ ಹೇಳಿಕೆ ನೀಡಿವೆ.
1998ರಲ್ಲಿ (ಮಲೇಷ್ಯಾ) ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಕೊನೆಯ ಬಾರಿ ಕ್ರಿಕೆಟ್ ನಡೆದಿತ್ತು. ಶಾನ್ ಪೊಲಾಕ್ ನೇತೃತ್ವದ ದಕ್ಷಿಣ ಆಫ್ರಿಕಾದ ಪುರುಷರ ತಂಡ ಅಂದು ಸ್ಟೀವ್ ವಾ ನಾಯಕತ್ವದ ಆಸ್ಟ್ರೇಲಿಯಾ ವಿರುದ್ಧ ಜಯಗಳಿಸಿ ಚಿನ್ನದ ಪದಕವನ್ನು ಗೆದ್ದುಕೊಂಡಿತು. ಇದೇ ವೇಳೆ ಜುಲೈ 28ರಿಂದ ಆಗಸ್ಟ್ 8ರವರೆಗೆ ನಡೆಯಲಿರುವ ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ 72 ದೇಶಗಳ 4,500 ಕ್ರೀಡಾಪಟುಗಳು ಭಾಗವಹಿಸಲಿದ್ದಾರೆ.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!