Tuesday, May 17, 2022
spot_img
Homeನಿಧನಕನ್ನಡ ಚಿತ್ರರಂಗದ ಹಿರಿಯ ನಟ ಅಶೋಕ್ ರಾವ್ ಇನ್ನಿಲ್ಲ

ಕನ್ನಡ ಚಿತ್ರರಂಗದ ಹಿರಿಯ ನಟ ಅಶೋಕ್ ರಾವ್ ಇನ್ನಿಲ್ಲ

ಬೆಂಗಳೂರು : ಕಳೆದ 15 ದಿನಗಳಿಂದ ಕ್ಯಾನ್ಸರ್ ಖಾಯಿಲೆಯಿಂದ ಬಳಲುತ್ತಿದ್ದ ಕನ್ನಡ ಚಿತ್ರರಂಗದ ಹಿರಿಯ ನಟ ಅಶೋಕ್ ರಾವ್ ಫೆ.೦2 ರಂದು ನಿಧನರಾಗಿದ್ದಾರೆ. ಹಲವು ದಿನಗಳಿಂದ ಕ್ಯಾನ್ಸರ್ ಖಾಯಿಲೆಯಿಂದ ಬಳಲುತ್ತಿದ್ದ ಅಶೋಕ್ ರಾವ್ ಚಿಕಿತ್ಸೆ ಪಡೆಯುತ್ತಿದ್ದರು. ಮಂಗಳವಾರ ಕೂಡ ಚಿಕಿತ್ಸೆ ಪಡೆದ ನಂತರವೂ ಚೆನ್ನಾಗಿದ್ದರು. ಆದರೆ ಮಧ್ಯರಾತ್ರಿ 12.30ಕ್ಕೆ ವಿದ್ಯಾರಣ್ಯಪುರದಲ್ಲಿರುವ ಮನೆಯಲ್ಲಿ ಕೊನೆಯುಸಿರೆಳೆದರು. ಈ ಬಗ್ಗೆ ನೆರೆಮನೆಯ ಸುದರ್ಶನ್ ಮಾಹಿತಿ ನೀಡಿದ್ದಾರೆ.
ನಟ ಅಶೋಕ್ ರಾವ್ ಪತ್ನಿ, ಮಗ ಹಾಗೂ ಸೊಸೆಯನ್ನು ಅಗಲಿದ್ದಾರೆ.
ಡಾ. ರಾಜ್ ಕುಮಾರ್ ಅವರ ‘ಪರಶುರಾಮ್’ ಚಿತ್ರದಲ್ಲಿ ಖಳನಾಯಕನ ಪಾತ್ರದ ಮೂಲಕ ಒಳ್ಳೆಯ ಹೆಸರನ್ನು ಗಳಿಸಿದ್ದ ಅಶೋಕ್ ರಾವ್ ಖುದ್ದು ಡಾ. ರಾಜ್ ಕುಮಾರ್‌ ಅವರೇ ಕರೆದು ಖಳನಾಯಕನ ಪಾತ್ರ ಮಾಡಿಸಿದ್ದರು. ಕನ್ನಡದ ನೂರಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅಶೋಕ್ ರಾವ್​ ನಟಿಸಿದ್ದು, ಅವರ ಕಂಚಿನ ಕಂಠದಿಂದಲೇ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದರು.
ಅಶೋಕ್ ರಾವ್ ಅವರು, ಸಿಕ್ಕಾಪಟ್ಟೆ ಇಷ್ಟಪಟ್ಟೆ, ಶಿವಂ, ವಸುಂಧರಾ, ಬ್ರಹ್ಮ, ಅತಿ ಅಪರೂಪ, ಪರಿಣಯ, ಶತ್ರು, ಮುಗಿಲ ಚುಂಬನ, ರಾಣಾ ಪ್ರತಾಪ್, ಬಾಸ್, ಪೊಲೀಸ್ ಕಥೆ, ಜೇಡ್ರಳ್ಳಿ, ಹೂ, ಕೃಷ್ಣನ್ ಲವ್ ಸ್ಟೋರಿ, ಕುಣಿದು ಕುಣಿದು ಬಾರೆ, ಯುವ, ಮನಸಾರೆ, ಮ್ಯಾಡ್ ಲವ್, ಬೊಂಬಾಟ್, ಅರ್ಜುನ್, ಸಂಗಾತಿ, ಪೊಲೀಸ್ ಕಥೆ, ಸಜನಿ, ಸೌಂದರ್ಯ, ಬೊಂಬುಗಳು ಸಾರ್ ಬೊಂಬುಗಳು, ಮತಾಡ್ ಮಾತಾಡ್ ಮಲ್ಲಿಗೆ, ಆಪರೇಷನ್ ಅಂಕುಶ, ತವರಿನ ಸಿರಿ, ತಿರುಪತಿ, ಸೈನೈಡ್, ಸಿರಿವಂತ, ರಿಷಿ, ಗಡಿಪಾರ್, ಇನ್ಸ್‌ಪೆಕ್ಟರ್ ಝಾನ್ಸಿ, ಆಟೋ ಶಂಕರ್, ಓಂ ಗಣೇಶ್, ಪ್ರೇಮಾ ಖೈದಿ, ಸೈನಿಕ, ಇಂದ್ರ ಧನುಷ್, ಹಬ್ಬ, ಓ ಪ್ರೇಮವೇ, ಸ್ನೇಹ, ಟುವ್ವಿ ಟುವ್ವಿ ಟುವ್ವಿ, ಜೋಡಿ ಹಕ್ಕಿ, ಅಶ್ವಮೇಧ, ಬಾ ನಲ್ಲೆ ಮಧುಚಂದ್ರಕೆ, ಶೃಂಗಾರ ಕಾವ್ಯ ಸೇರಿದಂತೆ ಕನ್ನಡದ ನೂರಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದಾರೆ.
ಸದ್ಯ ವಿದ್ಯಾರಣ್ಯಪುರದ ನಿವಾಸದಲ್ಲಿ ಅಶೋಕ್ ಅವರ ಪಾರ್ಥೀವ ಶರೀರವನ್ನು ಅಂತಿಮ ದರ್ಶನಕ್ಕೆ ಇಡಲಾಗಿದೆ.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!